ಚಿತ್ರದುರ್ಗ ವಾಲ್ಮೀಕಿ ಸಮಾವೇಶಕ್ಕೆ ರಾಮಣ್ಣ ಫಲದೊಡ್ಡಿ ಆಹ್ವಾನ
ಗದಗ: ಜ. 11ರಂದು ಬೆಳಗ್ಗೆ 11ಕ್ಕೆ ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ರಾಜ್ಯಮಟ್ಟದ ವಾಲ್ಮೀಕಿ ನಾಯಕ ಸಮಾಜದ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಗದಗ ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ರಾಮಣ್ಣ ಫಲದೊಡ್ಡಿ ತಿಳಿಸಿದ್ದಾರೆ. ಈ ಐತಿಹಾಸಿಕ ಸಮಾವೇಶದಲ್ಲಿ ವಾಲ್ಮೀಕಿ ನಾಯಕ ಸಮುದಾಯವನ್ನು ಸಂಘಟಿಸುವ ಮೂಲಕ ರಾಜಕೀಯ, ಸಾಮಾಜಿಕ, ಶೈಕ್ಷಣಿಕ ಹಕ್ಕುಗಳನ್ನು ಪಡೆಯುವ ಕುರಿತು ಚರ್ಚಿಸಲಾಗುವುದು. ಈ ವಿಷಯವಾಗಿ ಈಗಾಗಲೇ ಜಿಲ್ಲೆಯಾದ್ಯಂತ ಸಂಚರಿಸಿ ಜ. 11ರಂದು ನಡೆಯುವ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಆಯಾ ತಾಲೂಕು ಅಧ್ಯಕ್ಷರು, ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಸಂಘಟನೆ ಶಕ್ತಿ ತುಂಬಬೇಕೆಂದು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9880831661 ಸಂಪರ್ಕಿಸಿ ಮಾಹಿತಿ ಪಡೆಯಲು ಕೋರಿದ್ದಾರೆ.