ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಬಿಜೆಪಿ ಕಾರ್ಯಕರ್ತರ ಖಂಡನೆ

Mainashree
Updated On : 10 Jan 2014, 11:01 am

ಗಜೇಂದ್ರಗಡ: ಕಾಂಗ್ರೆಸ್ ನೇತೃತ್ವದ ಕೇಂದ್ರ ಯುಪಿಎ ಸರ್ಕಾರ ಪದೇ ಪದೇ ಇಂಧನ, ಅಡುಗೆ ಮತ್ತು ಅಟೋಗ್ಯಾಸ್ ಬೆಲೆ ಏರಿಸಿರುವ ಕ್ರಮ ಖಂಡಿಸಿ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸ್ಥಳೀಯ ಕಾಲಕಾಲೇಶ್ವರ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟಿಸಿದ ಮುಖಂಡರು ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಒಂದಿಲ್ಲೊಂದು ಕಾರಣ ನೆಪವೊಡ್ಡಿ ನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ ಜತೆಗೆ ಇಂಧನ ಬೆಲೆ ಬೇಕಾಬಿಟ್ಟಿಯಾಗಿ ಏರಿಸುವ ಮೂಲಕ ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಗದಾ ಪ್ರಹಾರ ನಡೆಸುತ್ತಿರುವ ಕೇಂದ್ರ ಸರ್ಕಾರ ಕೂಡಲೇ ನೈತಿಕ ಹೊಣೆ ಹೊತ್ತು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ರಾಜಿನಾಮೆ ನೀಡಬೇಕು. ಇಲ್ಲದಿದ್ದರೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ದೇಶಾದ್ಯಂತ ಉಗ್ರ ಪ್ರತಿಭಟನೆ ಕೈಗೊಳ್ಳಲಿದೆ ಎಂದು ಪುರಸಭಾ ಅಧ್ಯಕ್ಷೆ ಕವಿತಾ ಜಾಲಿಹಾಳ, ಸಿದ್ದಪ್ಪ ಬಂಡಿ, ಎಚ್.ಎಸ್. ಸೋಂಪುರ, ಬಿ.ಎಂ. ಸಜ್ಜನ, ಭಾಸ್ಕರಸಾ ರಾಯಭಾಗಿ, ಪ್ರಭು ಚವಡಿ, ಚಂದ್ರಶೇಖರ್ ಚಳಗೇರಿ, ವಿರೂಪಾಕ್ಷಪ್ಪ ಕುಂಬಾರ, ಮಹಾಂತೇಶ ಶಿಗರಿ, ಪರಶುರಾಮ ಚಿಲಝರಿ ಎಚ್ಚರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement