ಎಸ್ಸಿ, ಎಸ್ಟಿ ಕಾಲೋನಿಗಳ ಅಭಿವೃದ್ಧಿಗೆ ಬದ್ಧ: ಪಾಟೀಲ
ಗದಗ: ರೋಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮೀಣ ಪ್ರದೇಶಗಳ ಎಸ್ಸಿ, ಎಸ್ಟಿ ಕಾಲೋನಿಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ರೋಣ ಶಾಸಕ ಜಿ.ಎಸ್.ಪಾಟೀಲ ಹೇಳಿದರು. ಗದಗ ತಾಲೂಕಿನ ಹರ್ಲಾಪುರ ಗ್ರಾಮದಲ್ಲಿ ಎಸ್ಟಿ ಕಾಲೋನಿಯಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಮತಕ್ಷೇತ್ರದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಲೋನಿಯ ಅಭಿವೃದ್ಧಿಗಾಗಿ ಈಗಾಗಲೇ 98 ಲಕ್ಷಕ್ಕೂ ಹೆಚ್ಚಿನ ಹಣವನ್ನು ಬಿಡುಗಡೆ ಮಾಡಲಾಗಿದೆ. ಅಲ್ಲದೇ ವಿವಿಧ ಕಡೆಗಳಲ್ಲಿ ರಸ್ತೆ ಅಭಿವೃದ್ಧಿಗಾಗಿ, ಶಾಲಾ ಕೊಠಡಿಗಳ ನಿರ್ಮಾಣಕ್ಕಾಗಿ ಮತ್ತು ಶಾಲೆಗಳಲ್ಲಿ ತಡೆಗೋಡೆ ನಿರ್ಮಿಸಲು ಸಹ ಹಣವನ್ನು ಬಿಡುಗಡೆ ಮಾಡಲು ಅಗತ್ಯ ಕಾರ್ಯಸೂಚಿ ನೀಡಲಾಗಿದೆ ಎಂದರು. ಗ್ರಾಪಂ ಅಧ್ಯಕ್ಷೆ ಹಾಲಮ್ಮ ಸತ್ಯನಗೌಡ್ರ, ಫಕೀರಗೌಡ ಗೌಡ್ರ, ಡಾ. ಶಿವಕುಮಾರ ಸರ್ವಿ, ಸೋಮನಗೌಡ ಗೌಡ್ರ, ಜಗದೀಶಗೌಡ ಗೌಡ್ರ, ಕೊಟ್ಟಯ್ಯಜ್ಜ ಕಟ್ಟಿಮನಿ, ಶಿವಾನಂದಪ್ಪ ಯಾಳವಾಡ, ಎಚ್.ಆರ್. ಗದಗ, ಪರಮೇಶ್ವರಪ್ಪ ಹವಾಲ್ದಾರ್, ಪರಶುರಾಮ ಕೊಳಗೇರಿ, ಯಮನವ್ವ ಜಾತಲಿ, ವೀರಯ್ಯ ಸೋಮನಕಟ್ಟಿಮಠ, ಶಂಕರಗೌಡ ಪಾಟೀಲ, ವಿ.ಆರ್. ಗುಡಿಸಾಗರ ಮತ್ತಿತರರು ಇದ್ದರು.