ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ನಿವೃತ್ತ ನೌಕರರ ಸಂಘದ ಕಾರ್ಯ ಮಾದರಿ

Mainashree
Updated On : 11 Jan 2014, 11:31 am

ಕನ್ನಡಪ್ರಭ ವಾರ್ತೆ, ಗದಗ, ಜ. 10
ನಗರದಲ್ಲಿರುವ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ  ಹಲವು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಈ ಭಾಗದ ಜನಮೆಚ್ಚುಗೆಗೆ ಪಾತ್ರವಾಗಿದ್ದು, ಈ ಸಂಘದ ಕಾರ್ಯ ಇತರೇ ಸಂಘಗಳಿಗೆ ಮಾದರಿಯಾಗಿದೆ ಎಂದು ಹಾವೇರಿ ಲೋಕಸಭಾ ಸದಸ್ಯ ಶಿವಕುಮಾರ ಉದಾಸಿ ಹೇಳಿದರು.
ಈಚೆಗೆ ಮುಳಗುಂದ ನಾಕಾ ಬಳಿಯ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ರಾಜ್ಯ ನಿವೃತ್ತ ಸರ್ಕಾರಿ ನೌಕರರ, ಹಿರಿಯ ನಾಗರಿಕ ಕ್ಷೇಮಾಭಿವೃದ್ಧಿ ಸಂಘ ಹಾಗೂ ಗದಗ-ಬೆಟಗೇರಿ ರೋಟರಿ ಕ್ಲಬ್‌ನಿಂದ ನಿವೃತ್ತ ಹಿರಿಯ ನಾಗರಿಕರಿಗೆ ಹಮ್ಮಿಕೊಳ್ಳಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಕೇವಲ 20 ಸದಸ್ಯರಿಂದ ಪ್ರಾರಂಭವಾದ ಈ ಸಂಘ ಈಗ 711 ಸದಸ್ಯರೊಂದಿಗೆ ಇಷ್ಟುದೊಡ್ಡದಾಗಿ ಬೆಳದಿರುವುದು ಒಳ್ಳೆಯ ಸಾಧನೆ. ನಿಮ್ಮ ಅಭಿವೃದ್ಧಿಗಾಗಿ ನಾನು ಶ್ರಮಿಸುತ್ತೇನೆ. ಮೊದಲ ಆದ್ಯತೆಯಲ್ಲಿ ಸಂಘದ ಕಟ್ಟಡಕ್ಕೆ ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು.
ಅತಿಥಿಗಳಾಗಿ ಆಗಮಿಸಿದ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಆರ್.ಎನ್. ಪಾಟೀಲ ಮಾತನಾಡಿ, ನಿವೃತ್ತ ಹಿರಿಯ ನಾಗರಿಕರೆಲ್ಲರೂ ಉತ್ಸಾಹಿಗಳಾಗಿ ಕೆಲಸ ನಿರ್ವಹಿಸುತ್ತಿದ್ದು, ಇದು ಸಂತೋಷದ ಸಂಗತಿ. ನಿವೃತ್ತರ ಬೇಡಿಕೆಗೆ ಅನುಸರಿಸಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್ ಮಾಡಿದ್ದೇವೆ. ಆದರೆ ಸೌಲಭ್ಯಗಳ ಕೊರತೆಯಿಂದ ಪೂರ್ಣ ಪ್ರಮಾಣದಲ್ಲಿ ಜಾರಿಯಾಗಿಲ್ಲ. ನಿವೃತ್ತ ಹಿರಿಯ ನಾಗರಿಕರಿಗೆ ಹೆಚ್ಚಿನ ಕಾಳಜಿ ವಹಿಸಿ ಚಿಕಿತ್ಸೆ ನೀಡಲು ನಮ್ಮ ಆಸ್ಪತ್ರೆ ಸಿಬ್ಬಂದಿಗೆ ಸೂಚಿಸಲಾಗಿದೆ. ಅಲ್ಲದೇ 20 ಪ್ರತ್ಯೇಕ ಬೆಡ್‌ಗಳಿಗಾಗಿ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ರಾಜ್ಯ ವಿಜ್ಞಾನ ಪರಿಷತ್‌ಗೆ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಾಚಾರ್ಯ ಎಸ್.ವಿ. ಸಂಕನೂರ ಅವರನ್ನು ಸನ್ಮಾನಿಸಲಾಯಿತು.
ಎಸ್.ಸಿ. ಗಾಣಿಗೇರ, ಕೆ.ಐ. ಕುರಗೋಡ, ಎಸ್.ಐ. ಯಾಳಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement