ಲಾಲ್ಬಹಾದ್ದೂರ್ ಶಾಸ್ತ್ರಿ ನಿಷ್ಠೆ ಬೆಳೆಸಿಕೊಳ್ಳಿ: ಬ್ಯಾಳಿ
ಗದಗ: ಶಾಸ್ತ್ರೀಯವರು ದೇಶಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸಿ, ರೈತರಿಗಾಗಿ ಜೈ ಜವಾನ್ ಜೈ ಕಿಸಾನ್ ಘೋಷಣೆ ನೀಡಿ ಅಪ್ರತಿಮ ಸೇವೆ ಸಲ್ಲಿಸಿದ್ದಾರೆ. ಅಂಥ ಮಹಾನ್ ನಾಯಕರ ಆದರ್ಶಗಳನ್ನು ಇಂದಿನ ಯುವಪೀಳಿಗೆ ಅಳವಡಿಸಿಕೊಳ್ಳಬೇಕೆಂದು ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಗಣೇಶಸಿಂಗ್ ಬ್ಯಾಳಿ ಕರೆ ನೀಡಿದರು. ಬೆಟಗೇರಿಯ ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆಯ ಸಂಯುಕ್ತ ಪಪೂ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ದಿ. ಪ್ರಧಾನಿ ಲಾಲ್ಬಹಾದ್ದೂರ್ ಶಾಸ್ತ್ರಿಜೀ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಶಾಸ್ತ್ರೀಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ಅತಿಥಿಗಳಾಗಿ ಆಗಮಿಸಿದ್ದ ಉಪನ್ಯಾಸಕ ಡಿ.ಎಸ್. ನಾಯಕ ಮಾತನಾಡಿದರು. ಪ್ರಭಾರಿ ಪ್ರಾಚಾರ್ಯ ಸಿ.ಎಂ. ಮಾರನಬಸರಿ ಸೇರಿದಂತೆ ಮಹಾವಿದ್ಯಾಲಯದ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.