ನಾಳೆ ಸಾರ್ವಜನಿಕ ಕುಂದುಕೊರತೆ ಸಭೆ
ಗದಗ: ಸಾರ್ವಜನಿಕ ಕುಂದುಕೊರತೆಗಳ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯವಾಗಿ ಸರ್ಕಾರದ ಆಹಾರ ಭದ್ರತೆ ಯೋಜನೆಯಡಿ ಸಾರ್ವಜನಿಕ ವಿತರಣಾ ಪದ್ಧತಿ, ಸಮಗ್ರ ಮಕ್ಕಳ ಅಭಿವೃದ್ಧಿ ಯೋಜನೆ ಹಾಗೂ ಮಧ್ಯಾಹ್ನದ ಬಿಸಿಯೂಟ ವಿಷಯಗಳ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜ. 18ರಂದು 3ನೇ ಶನಿವಾರದಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಬೆಳಗ್ಗೆ 10.30 ಗಂಟೆಗೆ ಸಭೆ ಜರುಗಿಸಲಾಗುವುದು. ಪ್ರತಿ ತಿಂಗಳ 3ನೇ ಶನಿವಾರದಂದು ದೂರು ಸ್ವೀಕರಿಸಿ ವಿಚಾರಣೆ ನಡೆಸಲಾಗುವುದು. ಕಾರಣ ಜಿಲ್ಲೆಯ ಸಾರ್ವಜನಿಕರು ಈ ದಿಸೆಯಲ್ಲಿ ಮೇಲ್ಕಾಣಿಸಿದ ಆಹಾರ ವಿಷಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರುಗಳು ಇದ್ದಲ್ಲಿ ಜಿಲ್ಲಾಧಿಕಾರಿಗಳಿಗೆ ಖುದ್ದಾಗಿ ಸಲ್ಲಿಸಬಹುದಾಗಿದೆ. ಸಾರ್ವಜನಿಕರು ಮನವಿ ಸಲ್ಲಿಸಿದಲ್ಲಿ ಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಗದಗ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.