ಇಂದು ವಸ್ತು ಪ್ರದರ್ಶನ
ನರಗುಂದ: ತಾಲೂಕಿನ ಶಿರೋಳ ಗ್ರಾಮದ ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವ ಅಂಗವಾಗಿ ಜ. 18ರ 11-30ಕ್ಕೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ವಸ್ತುಪ್ರದರ್ಶನ ಕಾರ್ಯಕ್ರಮ ಗ್ರಾಮದ ಮರಡಿ ಮಾರುತಿ ದೇವಸ್ಥಾನದಲ್ಲಿ ಜರಗಲಿದೆ. ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಶ್ರೀ ಮತ್ತಿತರರು ಭಾಗವಹಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.