ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಸಮ್ಮೇಳನಗಳು ಮಕ್ಕಳ ಪ್ರತಿಭೆಗೆ ವೇದಿಕೆಯಾಗಲಿ: ಶಾಸಕ ದೊಡ್ಡಮನಿ

Vishwanath S
Updated On : 22 Jan 2014, 2:36 am

ಲಕ್ಷ್ಮೇಶ್ವರ: ಸರ್ಕಾರಗಳು ಶೈಕ್ಷಣಿಕ ಪ್ರಗತಿಗಾಗಿ ಸಾಕಷ್ಟು ಹಣ ವ್ಯಯ ಮಾಡುತ್ತಿದ್ದು, ವಿದ್ಯಾರ್ಥಿಗಳು ಯೋಜನೆಗಳ ಸದುಪಯೋಗ ಪಡಿಸಿಕೊಂಡು ಹೆಚ್ಚಿನ ಶಿಕ್ಷಣ ಹೊಂದಬೇಕು ಎಂದು ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.
ಪಟ್ಟಣದ ವಿನಾಯಕ ನಗರದಲ್ಲಿ ಈಚೆಗೆ ಬಿಸಿಎನ್ ವಿದ್ಯಾ ಸಂಸ್ಥೆಗಳ ಮಹಾಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಾರ್ಷಿಕ ಸಮ್ಮೇಳನಗಳಲ್ಲಿ ಮಕ್ಕಳ ಪ್ರತಿಭೆ ಹೊರಹಾಕುವ ಕಾರ್ಯವಾಗಬೇಕು. ಮಕ್ಕಳು ತಮ್ಮ ಶೈಕ್ಷಣಿಕ ಅವಧಿಯಲ್ಲಿ ಯಾವ ರೀತಿಯಾದ ಪ್ರಗತಿ ಹೊಂದಿವೆ ಎನ್ನುವುದನ್ನು ತೋರಿಸುವ ಕಾರ್ಯವನ್ನು ಮಾಡಬೇಕಾಗಿದೆ. ಇಂದು ಸ್ತ್ರೀ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ದೊರೆಯುತ್ತಿದ್ದು, ಸ್ತ್ರೀಯರು ಮನಸ್ಸು ಮಾಡಿದಲ್ಲಿ ಏನೆಲ್ಲಾ ಸಾಧನೆ ಮಾಡಬಲ್ಲರು. ಸರ್ಕಾರವು ಶಿಕ್ಷಣಕ್ಕಾಗಿ ಅನೇಕ ಯೋಜನೆ ಜಾರಿಗೆ ತಂದಿದೆ. ಹಿಂದುಳಿದ ಮತ್ತು ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಉಚಿತ ಮತ್ತು ಕಡ್ಡಾಯ ಶಿಕ್ಷಣ ಮಕ್ಕಳ ಹಕ್ಕು ಕಾನೂನು ಜಾರಿಗೆ ತಂದಿದೆ. ಶಿಕ್ಷಣವು ಅಜ್ಞಾನವನ್ನು ದೂರಮಾಡಿ ಉತ್ತಮ ನಾಗರಿಕನನ್ನಾಗಿ ಮಾಡುವ ಸಾಧನವಾಗಿದೆ ಎಂದು ಹೇಳಿದರು. ಜಿಪಂ ಅಧ್ಯಕ್ಷೆ ಕಮಲವ್ವ ಸಜ್ಜನರ, ಜಿಪಂನ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎಸ್. ದೊಡ್ಡಗೌಡರ, ಬಿಇಒ ಆರ್.ಎಸ್. ಬುರುಡಿ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷ ಬಸವರಾಜ ನೆಲವಿಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾರಂಭದಲ್ಲಿ ಜಿಪಂ ಉಪಾಧ್ಯಕ್ಷ ರಮೇಶ ಮುಂದಿನಮನಿ, ತಾಪಂ ಉಪಾಧ್ಯಕ್ಷೆ ಶಾರದಾ ಕವಲೂರ, ಶ್ರೀದೇವಿ ಹಿರೇಮಠ, ನಿರ್ದೇಶಕರಾದ ಲಲಿತಾ ನೆಲವಿಗಿ, ಪ್ರಶಾಂತ ನೆಲವಿಗಿ, ಲೋಹಿತ ನೆಲವಿಗಿ, ಡಾ. ರೇವತಿ ನೆಲವಿಗಿ, ಶಿಲ್ಪಾ ನೆಲವಿಗಿ, ಮಾಂತೇಶ ನೆಲವಿಗಿ, ಸುಷ್ಮಾ ನೆಲವಿಗಿ ಹಾಗೂ ಸಂಸ್ಥೆಯ ಆಡಳಿತಾಧಿಕಾರಿ ಆರ್.ಕೆ. ಕುಲಕರ್ಣಿ, ಮುಖ್ಯೋಪಾಧ್ಯಾಯ ಕೆ.ಎಸ್. ಕೋಷ್ಠಿ ಮೊದಲಾದವರು ಹಾಜರಿದ್ದರು. ಎನ್.ಕೆ. ಕುಲಕರ್ಣಿ ಸ್ವಾಗತಿಸಿದರು. ಚಿಕ್ಕ ಮಕ್ಕಳ ವೇಷಭೂಷಣ ಪ್ರದರ್ಶನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement