ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಪತ್ರಕರ್ತನ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹ

Mainashree
Updated On : 23 Jan 2014, 10:56 am

ಲಕ್ಷ್ಮೇಶ್ವರ: ಗದಗ ಜಿಲ್ಲೆಯ ರೋಣ ತಾಲೂಕಿನ ಗಜೇಂದ್ರಗಡದಲ್ಲಿ ಇತ್ತೀಚಿಗೆ ಪತ್ರಿಕಾ ವರದಿಗಾನ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ, ಶಿರಹಟ್ಟಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ವಿಶೇಷ ತಹಸೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು. ಜಿಲ್ಲಾಧಿಕಾರಿಗೆ ಬರೆದಿರುವ ಮನವಿ ಪತ್ರದಲ್ಲಿ ಪತ್ರಕರ್ತರ ಮೇಲೆ ಜಿಲ್ಲೆಯಲ್ಲಿ ಪದೇ ಪದೇ ಹಲ್ಲೆಗಳು ನಡೆಯುತ್ತಿದ್ದು, ತಪ್ಪಿತಸ್ಥರು ಎಷ್ಟೇ ಪ್ರಭಾವಿಯಾಗಿದ್ದರೂ ಅವರನ್ನು ಬಂಧಿಸಿ ಶಿಕ್ಷೆ ವಿಧಿಸಬೇಕು ಹಾಗೂ ಪತ್ರಕರ್ತರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಆಗ್ರಹಿಸಲಾಗಿದೆ. ಮನವಿ ಪತ್ರವನ್ನು ವಿಶೇಷ ತಹಸೀಲ್ದಾರ್ ಕೆ.ಎಫ್. ರಿತ್ತಿ ಅವರು ಸ್ವೀಕರಿಸಿ, ಜಿಲ್ಲಾಧಿಕಾರಿಗೆ ತಲುಪಿಸುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಗದಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ರಮೇಶ ನಾಡಿಗೇರ, ತಾಲೂಕು ಅಧ್ಯಕ್ಷ ಡಿ.ಎಂ. ಪೂಜಾರ, ಪತ್ರಕರ್ತ ಬಸವರಾಜ್ ಲಿಂಬಿಕಾಯಿ, ನಾಗರಾಜ್ ಹಣಗಿ, ಅಶೋಕ ಸೊರಟೂರ, ಮಲ್ಲು ಕಳಸಾಪುರ ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement