ಉದ್ಯೋಗ ಖಾತ್ರಿ ಯೋಜನೆ ಲಾಭ ಪಡೆಯಿರಿ: ತಳವಾರ
ರೋಣ: ತಾಲೂಕಿನ ಹುನಗುಂಡಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳ ಎಸ್‌ಸಿ, ಎಸ್‌ಟಿ ಪಂಗಡ ಹಾಗೂ ಚಿಕ್ಕ ಹಿಡುವಳಿದಾರರು ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅನೇಕ ಸೌಕರ್ಯಗಳಿವೆ. ಅವುಗಳ ಲಾಭವನ್ನು ಪಡೆಯಬೇಕು ಎಂದು ಹುನಗುಂಡಿ ಗ್ರಾಪಂ ಉಪಾಧ್ಯಕ್ಷ ಬಸವಂತಪ್ಪ ತಳವಾರ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಗ್ರಾಪಂ ವ್ಯಾಪ್ತಿಯ ಗ್ರಾಮಗಳ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬಹುದಾಗಿದೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ವೈಯಕ್ತಿಕ ಚಿಕ್ಕ ಹಿಡುವಳಿದಾರರಿಗೆ ದನದ ಕೊಟ್ಟಿಗೆ, ಕುರಿ ದಡ್ಡಿ, ಕೃಷಿ ಹೊಂಡ, ಬದು ನಿರ್ಮಾಣ, ಅರಣ್ಯೀಕರಣ, ಭೂಮಿ ಅಭಿವೃದ್ಧಿ ಪಡಿಸುವುದು ಸೇರಿದಂತೆ ಅನೇಕ ಸೌಲಭ್ಯಗಳಿವೆ. ಅವುಗಳ ಲಾಭ ಪಡೆಯಲು ಮತ್ತು ಈ ಕುರಿತು ಮಾಹಿತಿ ಪಡೆಯಲು ಗ್ರಾಪಂ ಪಿಡಿಒ ಹಾಗೂ ಗ್ರಾಪಂ ಕಾರ್ಯಾಲಯವನ್ನು ಸಂಪರ್ಕಿಸಬೇಕು. ಅರ್ಹರು ಫಾರ್ಮ್ ನಂಬರ್ 6 ರಲ್ಲಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.