ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ನರಗುಂದ: ಅರ್ಧಕ್ಕೆ ನಿಂತ ಶೌಚಾಲಯ ಕಾಮಗಾರಿ

Lingaraj Badiger
Updated On : 31 Jan 2014, 11:07 am

- ಎಸ್.ಜಿ. ತೆಗ್ಗಿನಮನಿ
ನರಗುಂದ: ಪಟ್ಟಣದ ಟಿಎಪಿಎಂಸಿ ಎದುರು ರಾಟಿಬಾಯಿ ರಸ್ತೆಯಲ್ಲಿ ಕಟ್ಟುತ್ತಿರುವ ಸಾರ್ವಜನಿಕ ಶೌಚಾಲಯ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಇದನ್ನು ಪೂರ್ಣಗೊಳಿಸಲು ಕ್ರಮಕೈಗೊಳ್ಳದೇ ನಿರ್ಲಕ್ಷ್ಯ ತೋರಲಾಗುತ್ತಿದೆ.
ಆದ್ದರಿಂದ ಕಾಮಗಾರಿ ಪ್ರಾರಂಭವಾಗಿ ಹಲವಾರು ತಿಂಗಳುಗಳೇ ಕಳೆದಿದ್ದರೂ ಇದರ ಬಗ್ಗೆ ಅಧಿಕಾರಿಗಳಾಗಲಿ, ಕಾಮಗಾರಿಯನ್ನು ಗುತ್ತಿಗೆ ಪಡೆದಿರುವ ಗುತ್ತಿಗೆದಾರರಾಗಲಿ ಗಮನ ನೀಡದೇ ಇರುವುದರಿಂದ ಕಾಮಗಾರಿ ಪೂರ್ಣಗೊಳ್ಳದೇ ಯಾವ ಉದ್ದೇಶಕ್ಕೆ ಅದರ ನಿರ್ಮಾಣ ಮಾಡಲಾಗುತ್ತಿತ್ತು. ಅದು ಸಂಪೂರ್ಣ ವಿಫಲವಾಗಿದೆ.
ಸಾರ್ವಜನಿಕರಿಗೆ ಅನುಕೂಲಕವಾಗಲೆಂದು ಉತ್ತಮ ಶೌಚಾಲಯ ನಿರ್ಮಿಸಬೇಕೆಂದು ಐ.ಡಿ.ಎಸ್.ಎಂ.ಟಿ. ಯೋಜನೆಯಲ್ಲಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಕಾಮಗಾರಿಯನ್ನು ಗುತ್ತಿಗೆ ಪಡೆದವರು ಕನಿಷ್ಠ 3 ತಿಂಗಳಲ್ಲಿ ಆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎನ್ನುವ ಸರ್ಕಾರದ ನಿಯಮ ಇಲ್ಲಿ ಪಾಲನೆಯಾಗುತ್ತಿಲ್ಲ. ಕಾಮಗಾರಿ ಪ್ರಾರಂಭವಾಗಿ 6 ತಿಂಗಳು ಕಳೆದರೂ ಅದು ಮುಗಿಯುವ ಲಕ್ಷಣ ಕಾಣುತ್ತಿಲ್ಲ.
ಅಧಿಕಾರಿಗಳ ನಿರ್ಲಕ್ಷ್ಯ: ನಗರದ ಬಹುತೇಕ ಕಡೆ ಸದ್ಯ ಇರುವ ಶೌಚಾಲಯಗಳಿಗೆ ಸರಿಯಾದ ವ್ಯವಸ್ಥೆ ಇಲ್ಲದೆ ಸಾರ್ವಜನಿಕರು ಪುರಸಭೆಯವರಿಗೆ ಹಿಡಿ ಶಾಪಹಾಕತ್ತಾ ಬಯಲಿನಲ್ಲಿ ಬಹಿರ್ದೆಸೆಗೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಪಟ್ಟಣದ ಜನಸಂಖ್ಯೆ ಬೆಳೆದಂತೆ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಚ್ಚೆಚ್ಚು ಶೌಚಾಲಯಗಳು ನಿರ್ಮಾಣವಾಗಬೇಕು. ಆದರೆ, ಇರುವ ಶೌಚಾಲಯಗಳೇ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇನ್ನು ನಿರ್ಮಾಣ ಹಂತದಲ್ಲಿರುವ ಶೌಚಾಲಯಗಳು ನಿಗದಿತ ಅವಧಿಯಲ್ಲಿ ಮುಗಿಯುತ್ತಿಲ್ಲ. ಅಧಿಕಾರಿಗಳ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ತೊಂದರೆಯಾಗುತ್ತಿರುವುದು ಮಾತ್ರ ಪಟ್ಟಣದ ಜನತೆಗೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement