ಪದ್ಮಾ ಹುಂಬಿ ಸಾಧನೆ
ಗದಗ: ಚೆನ್ನೈನ ಕ್ರಿಶ್ಚಿಯನ್ ಕಾಲೇಜಿನಲ್ಲಿ ಈಚೆಗೆ ನಡೆದ ಸದರನ್ಸ್ ಇಂಡಿಯಾ ಸೈನ್ಸ್ ಫೇರ್ 2014 ರಲ್ಲಿ ಗದಗ-ಬೆಟಗೇರಿಯ ಲೋಯಲಾ ಪ್ರೌಢ ಶಾಲೆಯ ಶಿಕ್ಷಕಿ ಪದ್ಮಾ ಹುಂಬಿ ರಾಜ್ಯವನ್ನು ಪ್ರತಿನಿಧಿಸಿ ಸ್ಪೇಷಲ್ ಟೀಚರ್ ಅವಾರ್ಡ್ ಪಡೆದಿದೆ. ದಕ್ಷಿಣ ಭಾರತದ ಎಲ್ಲಾ ರಾಜ್ಯಗಳ ಶಿಕ್ಷಕರು ಪಾಲ್ಗೊಂಡ ಈ ಕಾರ್ಯಕ್ರಮದಲ್ಲಿ ವಿಶೇಷ ಪ್ರಶಸ್ತಿ ಪಡೆದ ಪದ್ಮಾ ಹುಂಬಿ ಗದಗ ಜಿಲ್ಲೆಯ ಕೀರ್ತಿಯನ್ನು ದಕ್ಷಿಣ ಭಾರತ ಎಲ್ಲಾ ರಾಜ್ಯಗಳಿಗೂ ಪಸರಿಸುವಂತೆ ಮಾಡಿದ್ದು, ಶಿಕ್ಷಕಿಯ ಸಾಧನೆಗೆ ಡಿಡಿಪಿಐ ರಾಜೇಂದ್ರ ಪ್ರಸಾದ ಹಾಗೂ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರ ಬಳಗ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅರ್ಜಿ ಆಹ್ವಾನ
ಗದಗ: ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ವಿವಿಧ ಯೋಜನೆಗಳಲ್ಲಿ ಪುಸ್ತಕ ಖರೀದಿಗೆ ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಪುಸ್ತಕಗಳ ಸಂಪೂರ್ಣ ಮಾಹಿತಿಯ ಅರ್ಜಿಯನ್ನು ಭರ್ತಿ ಮಾಡಿ ಫೆ. 15ರೊಳಗೆ ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, ಡಾ. ಅಂಬೇಡ್ಕರ್ ಬೀದಿ, 4ನೇ ಮಹಡಿ ಬೆಂಗಳೂರು ಇಲ್ಲಿಗೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಮುಖ್ಯ ಗ್ರಂಥಾಲಯಾಧಿಕಾರಿ, ನಗರ ಕೇಂದ್ರ ಗ್ರಂಥಾಲಯ, ರೂ. ನಂ. 206, 2ನೇ ಮಹಡಿ, ಜಿಲ್ಲಾಡಳಿತ ಭವನ, ಹುಬ್ಬಳ್ಳಿ ರೋಡ್, ಗದಗ ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಅರ್ಜಿ ಆಹ್ವಾನ
ಗದಗ: ಜಿಲ್ಲೆಯ ಗದಗ ತಾಲೂಕು ಹಿಂದುಳಿದ ವರ್ಗಗಳ ವಿಸ್ತರ್ಣಾಧಿಕಾರಿಗಳ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ವಿದ್ಯಾರ್ಥಿ ನಿಲಯಗಳಿಗೆ 2013-14ನೇ ಸಾಲಿಗೆ ಹೊಸದಾಗಿ ಸೇರಬಯಸುವ ಬಿ.ಇಡಿ. ಮತ್ತು ನರ್ಸಿಂಗ್ ವಿದ್ಯಾರ್ಥಿನಿಯರಿಗೆ ಮತ್ತು ಬಿ.ಇಡಿ. ವಿದ್ಯಾರ್ಥಿಗಳಿಂದ ಅರ್ಜಿ ಕರೆಯಲಾಗಿದೆ.
ಆಸಕ್ತಿ ಇರುವ ವಿದ್ಯಾರ್ಥಿಗಳು ಅವಶ್ಯ ದಾಖಲೆಗಳೊಡನೆ ಸಂಬಂಧಿಸಿದ ವಿದ್ಯಾರ್ಥಿ ನಿಲಯಗಳಿಗೆ ಅಥವಾ ತಾಲೂಕು ಹಿಂದುಳಿದ ವರ್ಗಗಳ ವಿಸ್ತೀರ್ಣಾಧಿಕಾರಿಗಳ ಕಾರ್ಯಾಲಯ ಇವರಿಗೆ ಫೆ. 15ರ ಸಂಜೆ 5 ಗಂಟೆಯೊಳಗೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.