ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ದೇವಸ್ಥಾನ ಪಕ್ಕದ ಮಾಂಸದಂಗಡಿ ತೆರವಿಗೆ ಜಿಲ್ಲಾಧಿಕಾರಿ ಆದೇಶ

Mainashree
Updated On : 3 Jul 2014, 9:08 am

ಲಕ್ಷ್ಮೇಶ್ವರ: ಪಟ್ಟಣದ ಐತಿಹಾಸಿಕ ಸೋಮನಾಥ ದೇವಾಲಯದ ಪಕ್ಕದಲ್ಲಿ ಮಾಂಸ ಮಾರಾಟ ಮಾಡುತ್ತಿರುವ ಅಂಗಡಿಗಳನ್ನು ತೆರವುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್‌ಕುಮಾರ ಪುರಸಭೆಯ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಬುಧವಾರ ಪಟ್ಟಣದ ಒಳಚರಂಡಿ ಯೋಜನೆಗೆ ಬೇಕಾಗಿರುವ ಭೂಮಿ ಪರಿಶೀಲನೆಯ ಅಂಗವಾಗಿ ಆಗಮಿಸಿದ್ದ ಸಂದರ್ಭದಲ್ಲಿ ಇತಿಹಾಸ ಪ್ರಸಿದ್ಧ ಸೋಮೇಶ್ವರ ದೇವಾಲಯಕ್ಕೆ ಭೇಟಿ ನೀಡಿ, ಇನ್ಫೋಸಿಸ್ ಪ್ರತಿಷ್ಠಾನದ ವತಿಯಿಂದ ರು. 4 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ದೇವಾಲಯದ ಜೀರ್ಣೋದ್ದಾರ ಕಾರ್ಯವನ್ನು ವೀಕ್ಷಿಸಿ ಸುದ್ದಿಗಾರೊಂದಿಗೆ ಮಾತನಾಡಿದರು.
 ಐತಿಹಾಸಿಕ ದೇವಾಲಯಗಳ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು, ದೇವಸ್ಥಾನಕ್ಕೆ ಬೇಕಾಗಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವ ಪ್ರಯತ್ನ ಮಾಡುತ್ತೇನೆ. ದೇವಸ್ಥಾನಕ್ಕೆ ಬರುವ ಭಕ್ತರಿಗೆ ಕುಡಿಯುವ ನೀರಿಗಾಗಿ ಹಾಗೂ ದೇವಸ್ಥಾನದ ಸುತ್ತಲೂ ಉದ್ಯಾನವನ ನಿರ್ಮಾಣಕ್ಕೆ ಕೊಳವೆಬಾವಿಯನ್ನು ತೋಡಿಸಿಕೊಡಲಾಗುವುದು ಎಂದರು.
ಇದೆ ಸಂದರ್ಭದಲ್ಲಿ ಸಾರ್ವಜನಿಕರು ದೇವಸ್ಥಾನದ ದಕ್ಷಿಣ ದಿಕ್ಕಿನಲ್ಲಿ ಮಾಂಸ ಮಾರಾಟ ಮಾಡುವ ಅಂಗಡಿಗಳು ಇದ್ದು, ದೇವಸ್ಥಾನಕ್ಕೆ ಬರುವ ಭಕ್ತರಿಗೆ ಇವುಗಳು ಮುಜುಗರ ಉಂಟುಮಾಡುತ್ತಿವೆ. ಅದಕ್ಕಾಗಿ ಶೀಘ್ರವಾಗಿ ದೇವಸ್ಥಾನದ ಪಕ್ಕದಲ್ಲಿರುವ ಮಾಂಸದಂಗಡಿಗಳನ್ನು ಸ್ಥಳಾಂತರ ಮಾಡುವಂತೆ ಆಗ್ರಹಿಸಿದರು.
 ಅದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ದೇವಸ್ಥಾನದ ಪಕ್ಕದಲ್ಲಿರುವ ಮಾಂಸದಂಗಡಿಗಳನ್ನು ಬೇರೆಡೆಗೆ ಸ್ಥಳಾಂತರ ಮಾಡುವಂತೆ ಪುರಸಭೆಯ ಮುಖ್ಯಾಧಿಕಾರಿ ಉಮೇಶ ಗುಡ್ಡದ ಅವರಿಗೆ ಸೂಚನೆ ನೀಡಿದರು.
ಇದಕ್ಕೂ ಮೊದಲು ವಿಶೇಷ ತಹಸೀಲ್ದಾರ್ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಪಟ್ಟಣದ ಒಳಚರಂಡಿ ಯೋಜನೆಗೆ ಅಗತ್ಯವಿರುವ ಭೂಮಿ ಪರಿಶೀಲನೆ ನಡೆಸಿದರು.
ಪುರಸಭೆಯ ಅಧ್ಯಕ್ಷೆ ಗಂಗಮ್ಮ ಫಕ್ಕೀರಸ್ವಾಮಿಮಠ, ಉಪಾಧ್ಯಕ್ಷ ಎಂ.ಆರ್. ಪಾಟೀಲ, ಸ್ಥಾಯಿ ಸಮಿತಿ ಅಧ್ಯಕ್ಷ ಗಂಗಾಧರ ಮ್ಯಾಗೇರಿ, ತಹಸೀಲ್ದಾರ್ ಗಾಳಿ ಕೊಟ್ರೇಶ, ವಿಶೇಷ ತಹಸೀಲ್ದಾರ್ ತುಳಸಿ ಪಾಲನ್ಕರ್, ಚೆಂಬಣ್ಣ ಬಾಳಿಕಾಯಿ, ಸಿದ್ದನಗೌಡ ಬೊಳ್ಳೊಳ್ಳಿ, ವಿ.ಜಿ. ಪಡಗೇರಿ, ಜಯಕ್ಕ ಕಳ್ಳಿ, ಬಸವರಾಜ ಓದಾನವರ, ಕಿರಣ ನವಲೆ, ಪಾಟೀಲ, ಶಕ್ತಿ ಕತ್ತಿ ಹಾಗೂ ಪ್ರಾಚ್ಯವಸ್ತು ಇಲಾಖೆಯ ನಿರ್ದೇಶಕರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement