ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಮುಳಗುಂದದಲ್ಲಿ ಅಹವಾಲು ಸ್ವೀಕರಿಸಿದ ಸಚಿವ ಎಚ್.ಕೆ. ಪಾಟೀಲ

Mainashree
Updated On : 6 Jul 2014, 10:58 am

ಗದಗ: ತಾಲೂಕಿನ ಮುಳಗುಂದದಲ್ಲಿ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.  ಈ ವೇಳೆ ಚಿಂಚಲಿ ಗ್ರಾಮದಲ್ಲಿ ಪಾರಂಪರಿಕವಾಗಿ ಕಲ್ಲು ಒಡೆಯುವ ಕೆಲಸ ಮಾಡುವವರಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕಂದಾಯ ಹಾಗೂ ಪೊಲೀಸ್ ಇಲಾಖೆಯಿಂದ ಆಗುತ್ತಿರುವ ಸಮಸ್ಯೆ ಕುರಿತು ದೂರು ಸಲ್ಲಿಸಿದರು. ಇದನ್ನು ಗಂಭೀರವಾಗಿ ಪರಿಣಿಸಿದ ಸಚಿವ ಪಾಟೀಲ, ಸ್ಥಳದಲ್ಲಿದ್ದ ಗಣಿ ಮತ್ತು ವಿಜ್ಞಾನ ಅಧಿಕಾರಿ ವಿರೂಪಾಕ್ಷಗೌಡ ಅವರಿಗೆ ಮಾಹಿತಿ ಪಡೆದು, ಇವರೆಲ್ಲಾ ಹಲವಾರು ವರ್ಷಗಳಿಂದ ಇದೇ ವೃತ್ತಿಯನ್ನು ನಂಬಿಕೊಂಡಿದ್ದಾರೆ. ಆದರೆ, ಸರ್ಕಾರಿ ನಿಯಮಾವಳಿಗಳ ಪ್ರಕಾರ ಈ ರೀತಿಯ ಕಲ್ಲು ಗಣಿಗಾರಿಕೆ ಮಾಡಲು ಬರುವುದಿಲ್ಲ. ಅವರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿಯಮಾವಳಿಗಳ ಪ್ರಕಾರವೇ ಅವರ ವೃತ್ತಿ ನಡೆಯಲು ಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು.
ನಂತರ ಅಲ್ಲಿ ಕಲ್ಲು ಒಡೆಯುವ ಕೆಲಸ ಮಾಡುವ 400 ಜನರನ್ನು 20 ಜನರ ಗುಂಪುಗಳನ್ನಾಗಿ ಮಾಡಿಕೊಂಡು, ಪ್ರತಿ ಗುಂಪಿಗೂ ಅರ್ಧ ಎಕರೆ ಪ್ರದೇಶದಲ್ಲಿ ಗಣಿ ಇಲಾಖೆಯ ಅನುಮತಿ ಪಡೆದು ಕಲ್ಲು ಒಡೆಯಲು ಅವಕಾಶ ಕಲ್ಪಿಸಲು ತೀರ್ಮಾನಿಸಿ, ಆಗಸ್ಟ್ 15ರೊಳಗೆ ಎಲ್ಲ ಕಲ್ಲು ಒಡೆಯುವವರಿಗೆ ಅನುಮತಿ ನೀಡಲು ನಿರ್ಧರಿಸಲಾಯಿತು. ಇದೇ ಸಮಸ್ಯೆ ಕುರಿತು ಹಾತಲಗೇರಿ ಗ್ರಾಮಸ್ಥರು ಮನವಿ ಸಲ್ಲಿಸಿದ ವೇಳೆಯಲ್ಲಿ ಮಧ್ಯ ಪ್ರವೇಶಿಸಿದ ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ ಗಣಿಗಾರಿಕೆ ಮಾಡುವವರು ಗ್ರಾಮದಿಂದ ಕನಿಷ್ಠ 500 ಮೀಟರ್ ದೂರದಲ್ಲಿ ಮಾಡಬೇಕು. ಆದರೆ, ಹಾತಲಗೇರಿ ಗ್ರಾಮದ ಬಳಿಯಲ್ಲಿಯೇ ಗಣಿಗಾರಿಕೆ ನಡೆಯುತ್ತಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement