ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಕ್ರೂಸರ್ ಪಲ್ಟಿ: ಕೊಪ್ಪಳದ 11 ಮಂದಿಗೆ ಗಾಯ

Mainashree
Updated On : 9 Jul 2014, 9:19 am

ಗದಗ: ತಾಲೂಕಿನ ಲಕ್ಕುಂಡಿ ಗ್ರಾಮದ ಬಳಿ ಮಂಗಳವಾರ ಸಂಜೆ ಕ್ರೂಸರ್ ವಾಹನ ಪಲ್ಟಿಯಾಗಿ 11 ಜನರು ಗಾಯಗೊಂಡ ಘಟನೆ ಜರುಗಿದೆ. ಗಾಯಗೊಂಡವರನ್ನು ಕೊಪ್ಪಳ ಜಿಲ್ಲೆಯ ಮೈಲಾಪುರ ಗ್ರಾಮದವರು ಎಂದು ಗುರುತಿಸಲಾಗಿದ್ದು, ಅವರೆಲ್ಲಾ ಕಾರವಾರ ತಾಲೂಕಿನ ಹಳಗಾ ಗ್ರಾಮಕ್ಕೆ ಹೋಗಿ ಮರಳಿ ಗ್ರಾಮಕ್ಕೆ ತೆರಳುವ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಗಾಯಗೊಂಡವರಲ್ಲಿ ಐವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಗದಗ ಜಿಲ್ಲಾ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ಹಾಗೂ 6 ಮಂದಿಗೆ ಸಣ್ಣ ಪುಟ್ಟಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗಿದೆ. ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement