ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಮೂರು ವಾರ್ಡ್‌ಗೊಂದು ಶುದ್ಧ ಕುಡಿವ ನೀರು ಘಟಕ

Mainashree
Updated On : 10 Jul 2014, 9:10 am

ಗಜೇಂದ್ರಗಡ: ಪಟ್ಟಣದಲ್ಲಿ ಪುರಸಭೆ ವತಿಯಿಂದ ವಿತರಿಸುತ್ತಿರುವ ಶುದ್ಧ ಕುಡಿಯುವ ನೀರು ಸಾರ್ವಜನಿಕರಿಗೆ ಸಮರ್ಪಕವಾಗಿ ಲಭಿಸುತ್ತಿಲ್ಲ. ಹೀಗಾಗಿ ಪ್ರತಿ 3 ವಾರ್ಡ್‌ಗಳಿಗೊಂದು ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭಿಸಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಮುಂದಾಗಿ ಎಂದು ಪುರಸಭೆ ವಿಪಕ್ಷ ನಾಯಕ ಶಿವರಾಜ ಘೋರ್ಪಡೆ ಮತ್ತು ಸದಸ್ಯ ಎಂ.ಎಸ್. ಹಡಪದ ಸ್ಥಳೀಯ ಆಡಳಿತಕ್ಕೆ ಒತ್ತಾಯಿಸಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಗೌಳಿಗಲ್ಲಿಯಲ್ಲಿ ಪುರಸಭೆ ವತಿಯಿಂದ ಆರಂಭಿಸಿರುವ ಶುದ್ಧ ಕುಡಿಯುವ ನೀರಿನ ಘಟಕದಿಂದ ಪಟ್ಟಣದ ಜನತೆಗೆ ಸಮರ್ಪಕ ಸೇವೆ ಲಭಿಸುತ್ತಿಲ್ಲ ಹೀಗಾಗಿ ಕನಿಷ್ಠ 3 ವಾರ್ಡಿಗೊಂದರಂತೆ ಶುದ್ಧ ಕುಡಿಯುವ ನೀರಿನ ಘಟಕ ತೆರೆಯಬೇಕು.
ಪಟ್ಟಣದ ಜನಸಂಖ್ಯೆ ಆಧಾರದ ಮೇಲೆ ಒಂದು ಶುದ್ಧ ಕುಡಿಯುವ ನೀರಿನ ಘಟಕದಿಂದ ನೀರನ್ನು ಸರಬರಾಜು ಮಾಡುವುದು ಕಷ್ಟ ಸಾಧ್ಯ. ಅಲ್ಲದೇ ಸಾರ್ವಜನಿಕರು ಸರದಿ ಸಾಲಲ್ಲಿ ನಿಂತು ನೀರನ್ನು ಒಯ್ಯಲು ಪರದಾಡುತ್ತಿದ್ದಾರೆ. ಇದನ್ನೆ ಬಂಡವಾಳವಾಗಿ ಮಾಡಿಕೊಂಡು ಖಾಸಗಿ ಶುದ್ಧ ಕುಡಿಯುವ ನೀರಿನ ಘಟಕದವರು ಹಣ ಆಸೆಯಿಂದ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಪಟ್ಟಣದಲ್ಲಿ ರು. 10 ಗೆ 20 ಲೀಟರ್ ನೀರನ್ನು ಮಾರಾಟ ಮಾಡುವ ದಂಧೆಯನ್ನು ಪ್ರಾರಂಭಿಸಿದ್ದಾರೆ. ಹೀಗಾಗಿ ಪುರಸಭೆ ಆಡಳಿತ ಹಾಗೂ ಅಧಿಕಾರಿಗಳು ಪಟ್ಟಣದ ಪ್ರತಿ 3 ವಾರ್ಡ್‌ಗಳಿಗೊಂದು ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸುವಂತೆ ಆಗ್ರಹಿಸಿದರು.
  ಪುರಸಭೆ ಸದಸ್ಯ ಎಂ.ಎಸ್.ಹಡಪದ ಮಾತನಾಡಿ, ಪಟ್ಟಣದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳು  ಪರವಾನಗಿ ಪಡೆಯದೇ ಕುಡಿಯುವ ನೀರು ವಿತರಿಸುತ್ತಿರುವುದು ಸ್ಥಳೀಯ ಆಡಳಿತ ಹಾಗೂ ಅಧಿಕಾರಿಗಳ ಗಮನಕ್ಕೆ ಬಾರದಿರುವುದು ಆಡಳಿತ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಲೇವಡಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement