ಗದಗ

ಅನುದಾನ ದುರ್ಬಳಕೆ: ಪ್ರತಿಭಟನೆ

ಕನ್ನಡಪ್ರಭ ವಾರ್ತೆ, ರೋಣ, ಜು. 11
2010ರಿಂದ ಈವರೆಗೆ (2014) ಎಸ್.ಎಫ್.ಸಿ. ಅನುದಾನದಲ್ಲಿ ಎಸ್.ಸಿ./ ಎಸ್.ಟಿ. ಜನಾಂಗದವರಿಗೆ ಕಾಯ್ದಿರಿಸಿದ ಹಣ ದುರ್ಬಳಕೆಯಾಗಿದ್ದು, ಇದರಿಂದ ಜನಾಂಗದವರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ತಾಲೂಕು ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಶುಕ್ರವಾರ ಪುರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿ ಪುರಸಭೆ ಮುಖ್ಯಾಧಿಕಾರಿ ಮತ್ತು ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಸಮಿತಿ ತಾಲೂಕು ಸಂಚಾಲಕ ಪ್ರಕಾಶ ಹೊಸಳ್ಳಿ ಮಾತನಾಡಿ, 2010 ರಿಂದ 2014ರ ವರೆಗೆ  ಎಸ್.ಎಫ್.ಸಿಯ ಶೇ. 22.75ರ ಹಾಗೂ ಶೇ. 7.5 ಅನುದಾನದ ಸಂಪೂರ್ಣ ದುರ್ಬಳಕೆಯಾಗಿದೆ. ವಾಜಪೇಯಿ ನಗರ ವಸತಿ ಯೋಜನೆ, ಎಲ್‌ಪಿಜಿ ಗ್ಯಾಸ್ ಯೋಜನೆ, ವೈದ್ಯಕೀಯ ಭತ್ಯೆ, ಭಾಗ್ಯಜ್ಯೋತಿ ಯೋಜನೆ, ಕಂಪ್ಯೂಟರ್ ವಿತರಣೆ,  ಸಿಆರ್‌ಎಫ್ ಅನುದಾನ, ಲಿಡಕರ್ ಕುಟೀರ ಯೋಜನೆ, ಬಾಂಡೆ ಸಾಮಗ್ರಿ ವಿತರಣೆ ಸೇರಿದಂತೆ ಅನೇಕ ಸೌಲಭ್ಯಗಳನ್ನು  ಎಸ್.ಸಿ. ಮತ್ತು ಎಸ್.ಟಿ. ಜನಾಂಗದವರಿಗೆ ಈವರೆಗೂ ಸಮರ್ಪಕವಾಗಿ ವಿತರಣೆ ಮಾಡಿರುವುದಿಲ್ಲ. ಪಟ್ಟಣದಲ್ಲಿ ವಾಜಪೇಯಿ ವಸತಿ ಯೋಜನೆಯಲ್ಲಿ ಮನೆ ಕಟ್ಟಿಸಿಕೊಂಡಿರುವ ಫಲಾನುಭವಿಗಳಿಗೆ ಬಿಲ್ ಪಾವತಿಯಾಗಿರುವುದಿಲ್ಲ. ಈ ಕುರಿತು ಗಮನ ಹರಿಸಬೇಕಾದ ಪುರಸಭೆ ಆಡಳಿತ ಮತ್ತು ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪುರಸಭೆ ಅಧ್ಯಕ್ಷರು ಏಕಗವಾಕ್ಷಿ ನೀತಿ (ಏಕಪಕ್ಷೀಯ ನೀತಿ) ಅನುಸರಿಸುತ್ತಿದ್ದು, ಇದರಿಂದ ಎಸ್‌ಸಿ/ ಎಸ್.ಟಿ. ಜನಾಂಗಗಳಿಗೆ ಅನುದಾನ ಮತ್ತು ಸೌಲಭ್ಯಗಳು ವಿಳಂಬವಾಗುತ್ತಿವೆ. ಆದ್ದರಿಂದ ಅಧ್ಯಕ್ಷರು ಇಂತಹ ನೀತಿಯನ್ನು ಕೈಬಿಟ್ಟು ಸರ್ವ ಜನಾಂಗದ ಅಭಿವೃದ್ಧಿಯತ್ತ ಗಮನ ಹರಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆ ಎಚ್ಚರಿಕೆ
ಎಸ್.ಸಿ./ ಎಸ್.ಟಿ. ಜನಾಂಗದ ಫಲಾನುಭವಿಗಳಿಗೆ ಆಗಿರುವ ಅನ್ಯಾಯವನ್ನು ಜುಲೈ 18 ರೊಳಗೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಆಡಳಿತ ಮಂಡಳಿ ಗಮನಹರಿಸಿ ಸರಿಪಡಿಸಬೇಕು. ವಿಳಂಬ ಮಾಡಿದಲ್ಲಿ ಜು. 20 ರಂದು ಪುರಸಭೆ ಕಾರ್ಯಾಲಯ ಎದುರು ಉಗ್ರ ಸ್ವರೂಪದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಮನವಿ ಸ್ವೀಕರಿಸಿದ ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ ಆರ್.ಎಂ. ಪಾಟೀಲ ಮಾತನಾಡಿ, ಈ ಕುರಿತು ಸಮಗ್ರ ಪರಿಶೀಲನೆ ನಡೆಸಲಾಗುವುದು ಎಂದರು. ಪ್ರತಿಭಟನೆಯಲ್ಲಿ ದಲಿತ ಮುಖಂಡ ಮೌನೇಶ ಹಾದಿಮನಿ, ದೇವೇಂದ್ರಪ್ಪ ಕೊಳ್ಳಪ್ಪನವರ, ಮುತ್ತಣ್ಣ ಜೋಗಣ್ಣವರ, ಮಾರುತಿ ಹಿರೇಮನಿ, ಮಹೇಶ ಹಿರೇಮನಿ, ಅಯ್ಯಪ್ಪ ಚಲವಾದಿ ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

CJP ಯ 'ತಿರಂಗಾ ಮೆರವಣಿಗೆ: 6,000 ಪೊಲೀಸರು, 220 ಸಿಎಪಿಎಫ್ ತುಕಡಿಗಳ ನಿಯೋಜನೆ, ಸಿಸಿಟಿವಿ ಕಣ್ಗಾವಲು!

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ