ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ನರಗುಂದ ತಾಪಂ ಅಧ್ಯಕ್ಷರ ಚುನಾವಣೆ ಮುಂದೂಡಿಕೆ

Mainashree
Updated On : 12 Jul 2014, 9:57 am

ನರಗುಂದ: ತಾಪಂ ನೂತನ ಅವಧಿಗೆ ಅಧ್ಯಕ್ಷ ಸ್ಥಾನ ಎಸ್ಸಿಗೆ, ಉಪಾಧ್ಯಕ್ಷ ಹಿಂದುಳಿದ ಅ ವರ್ಗಕ್ಕೆ ಮೀಸಲಾಗಿದ್ದು, ಅದರ ಆಧಾರದಲ್ಲಿ ಶುಕ್ರವಾರ ಪಟ್ಟಣದ ತಾಪಂ ಸಭಾಭವನದಲ್ಲಿ ಆಯ್ಕೆ ಪ್ರಕ್ರಿಯೆ ನಿಗದಿಯಾಗಿತ್ತು. ನರಗುಂದ ತಾಪಂನಲ್ಲಿ ಒಟ್ಟು 11 ಸ್ಥಾನಗಳಿದ್ದು, ಅವುಗಳಲ್ಲಿ ಬಿಜೆಪಿ 10 ಸ್ಥಾನ, ಕಾಂಗ್ರೆಸ್ 1 ಸ್ಥಾನವನ್ನು ಪಡೆದಿತ್ತು. ನೂತನ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಸರ್ಕಾರ ನಿಗದಿ ಮಾಡಿದ ಮೀಸಲಾತಿಯು ಎಸ್ಸಿಗೆ ಮೀಸಲಾಗಿದ್ದು, ಬಿಜೆಪಿಯಲ್ಲಿ ಎಸ್ಸಿ ಸದಸ್ಯರು ಇಲ್ಲದೇ ಇರುವುದರಿಂದ ಅನಿವಾರ್ಯವಾಗಿ ಆ ಸ್ಥಾನ ಕಾಂಗ್ರೆಸ್‌ನಿಂದ ಆಯ್ಕೆಯಾಗಿರುವ ಸದಸ್ಯರಿಗೆ ಲಭ್ಯವಾಗಲಿದೆ.
ಆದರೆ ಶುಕ್ರವಾರ ಬಿಜೆಪಿಯ ಒಬ್ಬ ಸದಸ್ಯರನ್ನು ಹೊರತು ಪಡಿಸಿದಂತೆ ಇನ್ನುಳಿದ ಯಾವುದೇ ಸದಸ್ಯರು ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದೇ ಗೈರು ಹಾಜರಾದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ, ಐ.ಜಿ .ಗದ್ಯಾಳ ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆ 1993 ರ ಕಲಂ14(2)(ಸಿ) ರನ್ವಯ ಕೋರಂ ಭರ್ತಿ ಆಗದೇ ಇರುವ ಹಿನ್ನೆಲೆಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಂದೂಡಿ ಸಭೆ ರದ್ದು ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement