ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ವಸತಿರಹಿತರ ಚಳವಳಿ ಹತ್ತಿಕ್ಕುವ ಕುತಂತ್ರ: ವೆಂಕಟೇಶಯ್ಯ ವಿಷಾದ

Mainashree
Updated On : 12 Jul 2014, 9:58 am

ಗದಗ:  ವಸತಿರಹಿತರ ಬೇಡಿಕೆಗಳಿಗೆ ಸ್ಪಂದಿಸುವುದನ್ನು ಬಿಟ್ಟು ಜಿಲ್ಲಾಧಿಕಾರಿಗಳು ಚಳವಳಿಯನ್ನು ಹತ್ತಿಕ್ಕುವ ಕುತಂತ್ರ ನಡೆಸುತ್ತಿರುವುದು ಖಂಡನೀಯವಾಗಿದೆ ಎಂದು ಡಿ.ಎಸ್.ಎಸ್. ಸಂಚಾಲಕ ವೆಂಕಟೇಶಯ್ಯ ವಿಷಾದ ವ್ಯಕ್ತ ಪಡಿಸಿದರು.  ಅವರು ಗದಗ ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಮುಂದೆ ನಗರದ ವಸತಿರಹಿತರ ಬೇಡಿಕೆಗಳಿಗೆ ಆಗ್ರಹಿಸಿ ನಡೆಸುತ್ತಿರುವ 5ನೇ ದಿನದ ಧರಣಿ ಸತ್ಯಾಗ್ರಹಕ್ಕೆ ಭೇಟಿ ನೀಡಿ ಮಾತನಾಡಿದರು. ನೂರಾರು ವಸತಿಸೌಲಭ್ಯ ವಂಚಿತರು ಉಪವಾಸ ವನವಾಸ ಹೋರಾಟ ನಡೆಸುವ ದುಸ್ಥಿತಿಗೆ ನೇರವಾಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳೇ ಕಾರಣರಾಗಿದ್ದಾರೆ.
ನಿರ್ಲಕ್ಷ್ಯ ಮುಂದುವರಿಸಿದರೆ ಜಿಲ್ಲಾ ಉಸ್ತುವಾರಿ ಸಚಿವರ ಮತ್ತು ಜಿಲ್ಲಾಧಿಕಾರಿಗಳ ವಿರುದ್ಧ ಉಗ್ರ ಚಳವಳಿ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಸಾಹಿತಿ ಬಸವರಾಜ ಸೂಳಿಭಾವಿ ಧರಣಿ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿ ಮಾತನಾಡಿದರು.   
ಭಾರಿ ಮಳೆ ಹಾಗೂ ಗಾಳಿಯಿಂದಾಗಿ ಹೋರಾಟ ನಡೆಸುತ್ತಿರುವ ಅನೇಕ ಪ್ರತಿಭಟನಾಕಾರರಿಗೆ ಹಾಗೂ ಚಿಕ್ಕ ಮಕ್ಕಳಿಗೆ ಆರೋಗ್ಯದಲ್ಲಿ ಏರು-ಪೇರಾಗಿ ಅನೇಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳಿಂದ ವಸತಿರಹಿತರ ಬೇಡಿಕೆಗಳಿಗೆ ನಿರ್ಲಕ್ಷ್ಯ ಖಂಡಿಸಿ ಶನಿವಾರ ಅಹೋರಾತ್ರಿ ಧರಣಿಗೆ ನಡೆಸಲು ಪ್ರತಿಭಟನಾಕಾರರು ತೀರ್ಮಾನಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement