ಕಾನೂನು ಎಲ್ಲರಿಗೂ ಒಂದೇ: ವಿಜಯಕುಮಾರ
ಲಕ್ಷ್ಮೇಶ್ವರ: ಭಾರತದ ಸಂವಿಧಾನವು ಎಲ್ಲರಿಗೂ ಸಮಾನವಾದ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದ್ದು, ಅವುಗಳ ಪಾಲನೆ ಮಾಡುವುದು ಭಾರತೀಯರ ಕರ್ತವ್ಯವಾಗಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಪಟ್ಟಣದ ದಿವಾಣಿ ನ್ಯಾಯಾಧೀಶ ವಿಜಯಕುಮಾರ ಕನ್ನೂರ ಅಭಿಪ್ರಾಯ ಪಟ್ಟರು.
ಅವರು ಸಮೀಪದ ಶಿಗ್ಲಿ ಗ್ರಾಮದ ಎಸ್.ಎಸ್. ಕೂಡ್ಲಮಠ ಪ್ರೌಢಶಾಲೆಯಲ್ಲಿ ಈಚೆಗೆ ಜರುಗಿದ ಕಾನೂನು ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದಿನನಿತ್ಯದ ವ್ಯವಹಾರ ಮಾಡಲು ಕಾನೂನು ಪ್ರತಿಯೊಬ್ಬರಿಗೂ ಅವಶ್ಯವಾಗಿದ್ದು, ವಿದ್ಯಾರ್ಥಿಗಳು ಕೂಡಾ ಕಾನೂನಿನ ಬಗ್ಗೆ ತಿಳಿವಳಿಕೆ ಹೊಂದಿರುವುದು ಉತ್ತಮ ಎಂದರು. ಇದೇ ಸಂದರ್ಭದಲ್ಲಿ ಸರ್ಕಾರಿ ಅಭಿಯೋಜಕಿ ಜಿ.ಎಸ್. ಪಾಟೀಲ, ಬಿಇಓ ಆರ್.ಎಸ್. ಬುರಡಿ, ನ್ಯಾಯವಾದಿ ಎಸ್.ಪಿ. ಬಳಿಗಾರ, ಪಿಎಸ್ಐ ವಿಕಾಸ ಲಮಾಣಿ ಮಾತನಾಡಿದರು. ಮುಖ್ಯೋಪಾಧ್ಯಾಯ ಎನ್.ಎನ್. ನೆಗಳೂರ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಪ್ರೌಢಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ಹಾಜರಿದ್ದರು.