ಗದಗ

ಉಚಿತ ಚಿಕಿತ್ಸಾ ಶಿಬಿರ ಇಂದು

ಗದಗ: ತಾಲೂಕಿನ ಅಡವಿಸೋಮಾಪುರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ, ಜಿಲ್ಲಾ ಆಯುಷ್ ಇಲಾಖೆ, ಗದಗ ಜಿಲ್ಲಾ ಸರ್ಕಾರಿ ಅಯುಷ್ ವೈದ್ಯಾಧಿಕಾರಿಗಳ ಸಂಘ ಹಾಗೂ ಡಿಜಿಎಂ ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆ ಆಶ್ರಯದಲ್ಲಿ ಪಾಪನಾಶಿ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಉಚಿತ ಆಯುಷ್ ಚಿಕಿತ್ಸಾ ಶಿಬಿರ ಮತ್ತು ಮೂಲವ್ಯಾಧಿ ಚಿಕಿತ್ಸಾ ಶಿಬಿರವನ್ನು ಜು. 19ರಂದು ಅಡವಿಸೋಮಾಪುರದ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ.  ಹೆಚ್ಚಿನ ಮಾಹಿತಿಗಾಗಿ ಅಡವಿ ಸೋಮಾಪುರ ಗ್ರಾಪಂ ಕಾರ್ಯಾಲಯ, ಡಿಜಿಎಂ ಆಯುರ್ವೇದ ಕಾಲೇಜು ಆಸ್ಪತ್ರೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

ಸಾರ್ವಜನಿಕ ಕುಂದುಕೊರತೆಸಭೆ ಇಂದು
ಗದಗ: ಸಾರ್ವಜನಿಕ ಕುಂದುಕೊರತೆಗಳ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯವಾಗಿ ಸರ್ಕಾರದ ಆಹಾರ ಭದ್ರತೆ ಯೋಜನೆಯಡಿ ಸಾರ್ವಜನಿಕ ವಿತರಣಾ ಪದ್ಧತಿ, ಸಮಗ್ರ ಮಕ್ಕಳ ಅಭಿವೃದ್ಧಿ ಯೋಜನೆ ಹಾಗೂ ಮಧ್ಯಾಹ್ನದ ಬಿಸಿಯೂಟ ವಿಷಯಗಳ ಕುರಿತು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜು. 19ರಂದು ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಬೆಳಗ್ಗೆ 10.30ಕ್ಕೆ ಸಭೆ ಆಯೋಜಿಸಲಾಗಿದೆ. ಜಿಲ್ಲೆಯ ಸಾರ್ವಜನಿಕರು ಆಹಾರ ವಿಷಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರುಗಳು ಇದ್ದಲ್ಲಿ ಜಿಲ್ಲಾಧಿಕಾರಿಗೆ ಖುದ್ದಾಗಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಶುಲ್ಕ ಪಾವತಿಗೆ ಅವಧಿ ವಿಸ್ತರಣೆ: ಸೂಚನೆ
ಗದಗ: 2014-15ನೇ ಸಾಲಿನಲ್ಲಿ ಎಲ್ಲ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಪ್ರಥಮ ಪಿಯುಸಿ ತರಗತಿಗಳಿಗೆ ಮಾತ್ರ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳುವ ದಿನಾಂಕವನ್ನು ವಿಸ್ತರಿಸಲಾಗಿದೆ. ಜೂನ್-2014ರ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ 21-7-2014 ದಂಡ ಶುಲ್ಕ ರಹಿತ ದಾಖಲಾತಿ ಮಾಡಲು ಅವಕಾಶವಿದೆ ಎಂದು ಪದವಿ ಪೂರ್ವ ಶಿಕ್ಷಣ ಹಾಗೂ ವೃತ್ತಿ ಶಿಕ್ಷಣ ಇಲಾಖೆ ಗದಗ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಗಾಪುರ ಸರ್ಕಾರಿ ಪ್ರೌಢಶಾಲೆ ಸಂಸತ್ ರಚನೆ
ನರಗುಂದ: ತಾಲೂಕಿನ ಜಗಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ 2014-15ನೇ ಸಾಲಿಗೆ ಶಾಲಾ ಸಂಸತ್ ಈಚೆಗೆ ರಚನೆಯಾಯಿತು. ಪ್ರಧಾನಿಯಾಗಿ ಗಣೇಶ ತಳವಾರ, ಮಹಿಳಾ ಪ್ರತಿನಿಧಿಯಾಗಿ ಈರಮ್ಮ ಬನಪ್ಪನವರ, ಶಿಕ್ಷಣ ಮಂತ್ರಿಯಾಗಿ ಭೀಮವ್ವ ಮಂತ್ರಿ, ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗಕ್ಕೆ ಯಶೋಧಮಠ, ಸಾಂಸ್ಕೃತಿಕ ವಿಭಾಗಕ್ಕೆ ಶರಣವ್ವ ಗುರಪಾದಗೌಡ್ರ, ಕ್ರೀಡಾ ವಿಭಾಗಕ್ಕೆ ಅನಿಲ್ ಜೈನರ, ಆರೋಗ್ಯ ವಿಭಾಗಕ್ಕೆ ರೇಖಾ ಈಟಿ, ಪರಿಸರ ತುಳಸಗೇರಿ ರಾಮದುರ್ಗ, ಹಣಕಾಸು ಪ್ರವೀಣ ಕೆಂಚನಗೌಡ್ರ, ಗ್ರಂಥಾಲಯ ಕೀರ್ತಿ ಪಾಟೀಲ,  ಬಿಸಿಯೂಟ ವೀರನಗೌಡ ದೊಡ್ಡಗೌಡ್ರ, ಪ್ರವಾಸ ಲಲಿತಾ ಸತ್ಯರಡ್ಡಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

CJP ಯ 'ತಿರಂಗಾ ಮೆರವಣಿಗೆ: 6,000 ಪೊಲೀಸರು, 220 ಸಿಎಪಿಎಫ್ ತುಕಡಿಗಳ ನಿಯೋಜನೆ, ಸಿಸಿಟಿವಿ ಕಣ್ಗಾವಲು!

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ