ಗದಗ

ಕಾಲೇಜಿಗೆ ಸೌಲಭ್ಯ ಕಲ್ಪಿಸಿ

ಗಜೇಂದ್ರಗಡ: ಸ್ಥಳೀಯ ಎಸ್.ಎಂ. ಭೂಮರಡ್ಡಿ ಪದವಿ ಮಹಾವಿದ್ಯಾಲಯಕ್ಕೆ ಮೂಲ ಸೌಕರ್ಯ ಒದಗಿಸಲು ಆಗ್ರಹಿಸಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಎಸ್‌ಎಫ್‌ಐ ಸಂಘಟನೆ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ಕಾಲೇಜು ಪ್ರಾಚಾರ್ಯರಿಗೆ ಮನವಿ ಸಲ್ಲಿಸಿದರು.
ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮೀಣ ಪ್ರದೇಶದ ನೂರಾರು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ನೆರವಾಗಬೇಕಾಗಿದ್ದ ಎಸ್.ಎಂ. ಭೂಮರಡ್ಡಿ ಪದವಿ ಮಹಾವಿದ್ಯಾಲಯದಲ್ಲಿ ಮೂಲಸೌಲಭ್ಯ ದೊರೆಯದೆ. ತೀವ್ರ ತೊಂದರೆ ಅನುಭವಿಸುವಂತಾಗಿದೆ. ಈ ಕುರಿತು ಹಲವಾರು ಬಾರಿ ಕಾಲೇಜು ಆಡಳಿತ ಮಂಡಳಿ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.
ಭೂಮರೆಡ್ಡಿ ಕಾಲೇಜಿನಲ್ಲಿ ಸೌಲಭ್ಯ ಸಿಗುತ್ತದೆಂಬ ಆಶಾಭಾವನೆಯಿಂದ ಡೋನೆಶನ್ ನೀಡಿ ಇಲ್ಲಿ ಪದವಿ ಶಿಕ್ಷಣ ಪಡೆಯಲು ಬಂದರೆ ಇಲ್ಲಿ ಮೂಲಸೌಲಭ್ಯಗಳು ಮರೀಚಿಕೆಯಾಗಿ ಕಾಲೇಜು ಹಾಳು ಕೊಂಪೆಯಂತಿದೆ. ಕೂಡಲೇ ಆಡಳಿತ ಮಂಡಳಿ ಎಚ್ಚೆತ್ತು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಶಿಥಿಲಗೊಂಡಿರುವ ಮೇಲ್ಛಾವಣಿ, ಕಾಲೇಜು ಸಮಯ ಬದಲಾವಣೆ, ಗ್ರಂಥಾಲಯ ಕೊಠಡಿ ವಿಸ್ತರಣೆ ಹಾಗೂ ಪಠ್ಯಪುಸ್ತಕ, ದಿನಪತ್ರಿಕೆ, ವಾರ ಪತ್ರಿಕೆ, ಮಾಸಪತ್ರಿಕೆ ಒದಗಿಸಬೇಕು.
ಕಾಲೇಜು ಪ್ರಾಚಾರ್ಯ ಉಮೇಶ ಶಿರೋಳ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಮೂಲಸೌಲಭ್ಯದ ಜತೆಗೆ ಉತ್ತಮ ಶಿಕ್ಷಣ ನೀಡುವುದು ನಮ್ಮ ಸಂಸ್ಥೆಯ ಮೊದಲಾದ್ಯತೆಯಾಗಿದ್ದು, ಈ ನಡುವೆ ಕೆಲವು ಅಚಾತುರ್ಯದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದಲ್ಲಿ ಕೂಡಲೇ ಸರಿ ಪಡಿಸಲು ಆಡಳಿತ ಮಂಡಳಿ ಗಮನಕ್ಕೆ ತರುತ್ತೇನೆ ಎಂದು ಭರವಸೆ ನೀಡಿದ ನಂತರ ವಿದ್ಯಾರ್ಥಿಗಳು ತರಗತಿಗೆ ಹಾಜರಾದರು.
ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಶಿವು ಚವ್ಹಾಣ, ಡಿವೈಎಫ್‌ಐ ಮುಖಂಡ ಬಾಲು ರಾಠೋಡ, ಬಾಲಕೃಷ್ಣ ಜಾಡಬಂಡಿ, ದಾವಲಸಾಬ ತಾಳಿಕೋಟಿ, ಶಿವಾಜಿ ಗಡ್ಡದ, ಅಶೋಕ ಉಕ್ಕಿಸಲ, ಪ್ರಕಾಶ ಹೆಳವರ, ಶರಣಯ್ಯ ಸೂಗೀರಯ್ಯನಮಠ, ಮಂಜು ಕಲಾಲ ಪ್ರತಿಭಟನೆಯಲ್ಲಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ

ದೆಹಲಿಯ ಕನ್ನಾಟ್ ಪ್ಲೇಸ್‌ನಲ್ಲಿ ಅ.16ರ CJPಯ ಪ್ರತಿಭಟನೆಗೆ ತಡೆ ನೀಡಲು ಹೈಕೋರ್ಟ್ ನಕಾರ!

ಕಾಕ್ರೋಚ್ ಜನತಾ ಪಾರ್ಟಿ, ಕಾಂಗ್ರೆಸ್ ಎರಡೂ ಒಂದೇ; ಇಲ್ಲಿ ನಿಮ್ಮನ್ನು ಯಾರೂ ಬಂಧಿಸಲ್ಲ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ!

ಪೊಲೀಸ್ ಕಮಿಷನರ್ ಕಚೇರಿ ಮುಂದೆ HDK ಧರಣಿ: ಸ್ಟಿಂಗ್‌ ರೂವಾರಿಯ ಬಂಧನಕ್ಕೆ ಆಗ್ರಹ; ಎರಡು ದಿನಗಳ ಡೆಡ್‌ಲೈನ್‌!

Indian Stock Market: ಕೊನೆಗೂ ಪುಟಿದಿದ್ದ ಭಾರತೀಯ ಷೇರು ಮಾರುಕಟ್ಟೆ, ಸೆನ್ಸೆಕ್ಸ್ ದಾಖಲೆಯ ಏರಿಕೆ