ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಅತ್ಯಾಚಾರ: ಮುಖ್ಯಮಂತ್ರಿ ಹೇಳಿಕೆಗೆ ಆಕ್ಷೇಪ

Rashmi Kasaragodu
Updated On : 20 Jul 2014, 12:00 pm

ಮುಂಡರಗಿ: ರಾಜ್ಯದಲ್ಲಿ ದಿನೇ ದಿನೆ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಗಳ ಕುರಿತು ವಿಧಾನಸಭೆಯಲ್ಲಿ ಪ್ರತಿಪಕ್ಷಗಳು ಪ್ರಶ್ನಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೇಜವಾಬ್ದಾರಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಮುಂಡರಗಿ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಶಂಕ್ರಪ್ಪ ಬಾರಿಕಾಯಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಅವರು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅತ್ಯಾಚಾರ ಪ್ರಕರಣಗಳ ಕುರಿತು ಅಧಿಕಾರಿಗಳ ವಿರುದ್ಧ, ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಪ್ರತಿಪಕ್ಷಗಳು ಚರ್ಚಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿಂದಿನ ಬಿಜೆಪಿ ಸರ್ಕಾರ ರೇಪ್‌ಕೇಸ್‌ನಲ್ಲಿ ಭಾಗಿಯಾದವರನ್ನು ಮಂತ್ರಿ ಮಾಡಿತ್ತು, ವಿಧಾನಸಭೆಯಲ್ಲಿ ನೀಲಿಚಿತ್ರ ನೋಡಿದವರನ್ನು ಮಂತ್ರಿ ಮಾಡಿತ್ತು ಎನ್ನುವ ಮಾತುಗಳನ್ನಾಡುವ ಬದಲು ಇದೀಗ ನಡೆಯುತ್ತಿರುವ ಪ್ರಕರಣಗಳ ಕುರಿತು ತಮ್ಮ ಸರ್ಕಾರ ತೆಗೆದುಕೊಳ್ಳುವ ನಿರ್ಧಾರ ತಿಳಿಸಬೇಕೆ ಹೊರತು ಈ  ರೀತಿ ಉತ್ತರ ಕೊಡುವುದು ಸರಿಯಲ್ಲ ಎಂದರು.
ಸದನದಲ್ಲಿ ಬರಗಾಲ, ರೈತರ ಸಮಸ್ಯೆ, ಮಹಿಳೆಯರ ಮೇಲೆ ಹಾಗೂ ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರಗಳ ಕುರಿತು ಹಾಗೂ ಇತರೆ ವಿಷಯಗಳನ್ನು ಚರ್ಚಿಸುವ ಸಂದರ್ಭದಲ್ಲಿಯೂ ಸಹ ತಾವು ನಿದ್ರೆ ಮಾಡುತ್ತಿರುವುದು ಎಷ್ಟರ ಮಟ್ಟಿಗೆ ಸೂಕ್ತವಾಗುತ್ತದೆ ಎಂದು ಬಾರಿಕಾಯಿ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement