ಕ್ರೀಡಾಪಟುಗಳಿಗೆ ಸೂಚನೆ
ಗದಗ: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರದಿಂದ ನಿಗದಿಪಡಿಸಿದ ಪ್ರವೇಶ ಶುಲ್ಕ, ಬೋಧನಾ ಶುಲ್ಕವನ್ನು ಮಾತ್ರ ಮರುಪಾವತಿ ಮಾಡಲಾಗುವುದು. ಆಯಾ ವರ್ಷದ ಶೈಕ್ಷಣಿಕ ಶುಲ್ಕ ಮರುಪಾವತಿಯನ್ನು ಹಿಂದಿನ ವರ್ಷದ ಶೈಕ್ಷಣಿಕ ವರ್ಷದ ಸಾಧನೆಯನ್ನು ಪರಿಗಣಿಸಿ ನೀಡಲಾಗುವುದು. (ಜಿಮ್ನಾಸ್ಟಿಕ್ ಮತ್ತು ಈಜು ಕ್ರೀಡಾಪಟುಗಳಿಗೆ 5ನೇ ತರಗತಿಯಿಂದ ಸ್ನಾತಕೋತ್ತರ ಪದವಿಯವರೆಗೆ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳು ಅರ್ಹರಿರುತ್ತಾರೆ). ನಿಗದಿತ ಅರ್ಜಿ ನಮೂನೆಯನ್ನು ಮಾರ್ಗಸೂಚಿಗಳೊಂದಿಗೆ ಈ ಕಾರ್ಯಾಲಯದಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಸೂಕ್ತವಾದ ದೃಢೀಕೃತ ದಾಖಲೆಗಳೊಂದಿಗೆ ಆಗಸ್ಟ್ 30ರೊಳಗಾಗಿ ಸಹಾಯಕ ನಿರ್ದೇಶಕರು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಗದಗ ಈ ಕಾರ್ಯಾಲಯಕ್ಕೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.