ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಗಮಕ ವಾಚನ ಶಿಬಿರ

Rashmi Kasaragodu
Updated On : 20 Jul 2014, 11:58 am

ಗದಗ:  ಕರ್ನಾಟಕ ಸಂಗೀತ, ನೃತ್ಯ, ಅಕಾಡೆಮಿಯು ಆ. 4 ಮತ್ತು 5ರಂದು ಹರಿಹರದ ರಾಘವೇಂದ್ರ ಸ್ವಾಮಿ ವೃಂದಾವನ ಟ್ರಸ್ಟ್ ಸಹಯೋಗದೊಂದಿಗೆ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳ ಕನ್ನಡ ಶಿಕ್ಷಕ ಶಿಕ್ಷಕಿಯರಿಗೆ ಗಮಕ ವಾಚನ ಹಾಗೂ ಹರಿದಾಸ ಕೀರ್ತನ ಶಿಬಿರವನ್ನು ಹರಿಹರದಲ್ಲಿ ಹಮ್ಮಿಕೊಂಡಿದೆ. ಶಿಬಿರದಲ್ಲಿ ಪ್ರಾಥಮಿಕ ಸಂಗೀತ ಜ್ಞಾನವುಳ್ಳ ಪ್ರೌಢಶಾಲೆ ಕನ್ನಡ ಶಿಕ್ಷಕ ಶಿಕ್ಷಕಿಯರು ಭಾಗವಹಿಸಬಹುದಾಗಿದೆ. ಪ್ರತಿ ಜಿಲ್ಲೆಗೆ ಇಬ್ಬರಂತೆ ಒಟ್ಟು 60 ಮಂದಿ ಶಿಬಿರದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಥಮ ಆದ್ಯತೆ ಮೇರೆಗೆ ಶಿಬಿರಾರ್ಥಿಗಳನ್ನು ಅಕಾಡೆಮಿಗೆ ಆಯ್ಕೆ ಮಾಡಲಾಗುವುದು. ಆಯ್ಕೆಯಲ್ಲಿ ಅಕಾಡೆಮಿಯ ತೀರ್ಮಾನವೇ ಅಂತಿಮ. ಶಿಬಿರವು ಉಚಿತವಾಗಿದ್ದು, ಶಿಬಿರದಲ್ಲಿ ಪಾಲ್ಗೊಳ್ಳಲು ಆಯ್ಕೆಯಾದ ಶಿಬಿರಾರ್ಥಿಗಳಿಗೆ ಪತ್ರ ಮುಖೇನ ವಿವರಗಳನ್ನು ನೀಡಲಾಗುವುದು. ಶಿಬಿರಾರ್ಥಿಗಳು ತಮ್ಮ ಸ್ವ ವಿವರ ಜು. 21ರೊಳಗಾಗಿ ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ ಜೆಸಿ ರಸ್ತೆ, ಬೆಂಗಳೂರು-2, ಇಲ್ಲಿಗೆ ಕಳುಹಿಸಲು ಪ್ರಕಟಣೆ ತಿಳಿಸಿದೆ.

ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಬಹುಮಾನ

ಗದಗ:  ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ ಸ್ನಾತಕೋತ್ತರ ಪದವಿಗಳಲ್ಲಿ ಶೇ. 60ಕ್ಕಿಂತ ಹೆಚ್ಚು ಅಂಕ ಪಡೆದಿರುವ ಗದಗ ಜಿಲ್ಲೆ ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಬಹುಮಾನ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸಂಬಂಧಿಸಿದ ಕಾಲೇಜುಗಳ ಮುಖ್ಯಸ್ಥರ ದೃಢೀಕರಣದೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜು. 26ರೊಳಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಾರ್ಯಾಲಯ, ಜಿಲ್ಲಾ ಆಡಳಿತ ಭವನ ಕೊಠಡಿ ಗದಗ ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಮೀಪದ ತಾಲೂಕು ಪಂಚಾಯಿತಿ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement