ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಅತ್ಯಾಚಾರ ಖಂಡಿಸಿ ಇಂದು ಬಿಜೆಪಿ ಪ್ರತಿಭಟನೆ

Mainashree
Updated On : 21 Jul 2014, 10:02 am

ಗದಗ:  ರಾಜ್ಯದಲ್ಲಿ ಮಹಿಳೆಯರು ಮತ್ತು ಬಾಲಕಿಯರ ಮೇಲಿನ ದೌರ್ಜನ್ಯ, ಅತ್ಯಾಚಾರ ಘಟನೆ ಹಾಗೂ ಅಸಮರ್ಥ ರಾಜ್ಯ ಗೃಹ ಸಚಿವರ ರಾಜಿನಾಮೆಗೆ ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಜು. 21ರ ಬೆಳಗ್ಗೆ 11 ಗಂಟೆಗೆ ನಗರದ ಮಹಾತ್ಮಾಗಾಂಧಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಮಾಜಿ ಸಚಿವರು, ಶಾಸಕರು, ಪಕ್ಷದ ಮುಖಂಡರು ಭಾಗವಹಿಸಲಿದ್ದು, ಬಿಜೆಪಿ ಎಲ್ಲ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು, ಚುನಾಯಿತ ಪ್ರತಿನಿಧಿಗಳು ಭಾಗವಹಿಸಬೇಕೆಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಂ.ಎಂ. ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೋವಾ ಕನ್ನಡಿಗರ ರಕ್ಷಣೆಗೆ  ಗದಗ ಕಸಾಪ ಘಟಕ ಆಗ್ರಹ
ಗದಗ:  ಕನ್ನಡಿಗರ ಒಕ್ಕಲೆಬ್ಬಿಸುವ ಗೋವಾ ಸರ್ಕಾರದ ಕೃತ್ಯ ಅಮಾನವೀಯವಾದದ್ದು, ಈ ಕುರಿತು ರಾಜ್ಯ ಸರ್ಕಾರ ಸೂಕ್ತ ನಿರ್ಣಯ ಕೈಗೊಂಡು ಕನ್ನಡಿಗರ ರಕ್ಷಣೆಗೆ ಮುಂದಾಗಬೇಕು ಎಂದು ಗದಗ ತಾಲೂಕು ಕಸಾಪ ಅಧ್ಯಕ್ಷ ಕಿಶೋರಬಾಬು ನಾಗರಕಟ್ಟಿ ಆಗ್ರಹಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಹೊಟ್ಟೆಪಾಡಿಗಾಗಿ ದುಡಿಮೆ ಅರಸಿ ಕೂಲಿ ಮಾಡಿಕೊಂಡು ಬದುಕುತ್ತಿರುವ ಕನ್ನಡಿಗರನ್ನು ಗೋವಾ ಸರ್ಕಾರವು ನಿರಾಶ್ರಿತರನ್ನಾಗಿಸಿದ ಕಾರ್ಯ ಖಂಡನಾರ್ಹ. ಮನೆಗಳನ್ನು ಕಳೆದುಕೊಂಡ ಕನ್ನಡಿಗರಿಗೆ ತಕ್ಷಣ ಸೂಕ್ತವಾದ ಪುನರ್ ವಸತಿಯನ್ನು ಗೋವಾ ಸರ್ಕಾರ ಕೂಡಲೇ ಕಲ್ಪಿಸಬೇಕು. ಮಖ್ಯಮಂತ್ರಿ ಸಿದ್ದರಾಮಯ್ಯ ಗೋವಾ ಮುಖ್ಯಮಂತ್ರಿ ಜತೆ ಮಾತುಕತೆ ನಡೆಸಿ ಗೋವಾ ಕನ್ನಡಿಗರನ್ನು ರಕ್ಷಿಸುವ ಕಾರ್ಯವನ್ನು ಕೂಡಲೇ ಮಾಡಬೇಕೆಂದು ಆಗ್ರಹಿಸಿದ್ದಾರೆ. ಘೋರ ಕೆಲಸವನ್ನು ಗೋವಾ ಸರ್ಕಾರ ಈ ಕೂಡಲೇ ನಿಲ್ಲಿಸಬೇಕು ಹಾಗೂ ಕನ್ನಡಿಗರಿಗೆ ಸರಿಯಾದ ನ್ಯಾಯವನ್ನು ಒದಗಿಕೊಡಬೇಕೆಂದು ಗದಗ ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಶಶಿಕಾಂತ ಕೊರ್ಲಹಳ್ಳಿ, ಕವಿತಾ ದಂಡಿನ, ಬಿ.ಜಿ. ಹಿರೇಮಠ, ದತ್ತಪ್ರಸನ್ನ ಪಾಟೀಲ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement