ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಅತ್ಯಾಚಾರಿಗಳಿಗೆ ಕಠಿಣ ಕ್ರಮ: ಮಹಿಳೆಯರ ಆಗ್ರಹ

Mainashree
Updated On : 21 Jul 2014, 10:02 am

ಗದಗ: ರಾಜ್ಯದಲ್ಲಿ ಪ್ರತಿನಿತ್ಯ ನಿರಂತರವಾಗಿ ಮಹಿಳೆಯರ ಮೇಲೆ, ವಿದ್ಯಾರ್ಥಿನಿಯರ ಮೇಲೆ ಹಾಗೂ ಚಿಕ್ಕ ಬಾಲಕಿಯರ ಮೇಲೆ ಅತ್ಯಾಚಾರ ಘಟನೆಗಳು ನಡೆದರೂ ರಾಜ್ಯ ಸರ್ಕಾರ ಮೌನವನ್ನು ಧರಸಿದ್ದು, ತಕ್ಷಣ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಅತ್ಯಾಚಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಶನಿವಾರ ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣಾ ಸಮಿತಿಯ ಸ್ಲಂ ಮಹಿಳಾ ಘಟಕದ ಪದಾಧಿಕಾರಿಗಳು ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ನಮ್ಮ ರಾಜ್ಯದಲ್ಲಿ ಮಹಿಳೆಯರಿಗೆ ಹಾಗೂ ಶಾಲಾ ಕಾಲೇಜುಗಳ ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ, ರಾಜ್ಯದಲ್ಲಿ ಅಪರಾಧಿಗಳಿಗೆ ಕಾನೂನಿನ ಭಯವಿಲ್ಲದೇ ಇಂತಹ ಪ್ರಕರಣಗಳು ಮೇಲಿಂದ ಮೇಲೆ ಜರುಗುತ್ತಿದ್ದು, ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿಯರು ನಗರಕ್ಕೆ ಶೈಕ್ಷಣಿಕ್ಕಾಗಿ ಬರುವ ವೇಳೆ ಸೂಕ್ತ ವ್ಯವಸ್ಥೆ ಇಲ್ಲದೇ ಅನೇಕ ಅತ್ಯಾಚಾರ ಪ್ರಕರಣಗಳು ನಡೆದಿರುವ ಉದಾಹರಣೆಗಳಿವೆ. ರಾಜ್ಯದ ರಾಜಧಾನಿಯಾದ ಬೆಂಗಳೂರು ನಗರದಲ್ಲಿಯೇ ಇತ್ತೀಚಿಗೆ ಒಂದೇ ದಿನಕ್ಕೆ ಸಾಲು ಸಾಲಾಗಿ ಮಹಿಳೆಯರ ಮೇಲೆ, ವಿದ್ಯಾರ್ಥಿನಿಯರ ಮೇಲೆ ಹಾಗೂ ಚಿಕ್ಕ ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ಘಟನೆಗಳು ನಡೆದರೂ ರಾಜ್ಯ ಸರ್ಕಾರ ಎಚ್ಚೆತ್ತು ಕಠಿಣ ಕಾನೂನು ಜಾರಿಗೆ ಮುಂದಾಗದೇ ಇರುವುದು ಖಂಡನಿಯವಾಗಿದೆ. ಇಂತಹ ಅನೇಕ ಪ್ರಕರಣಗಳು ನಡೆಯುವ ಸಂದರ್ಭದಲ್ಲಿ ಪೊಲೀಸರ ನಿರ್ಲಕ್ಷವೇ ಹಾಗೂ ಜನಪ್ರತಿನಿಧಿಗಳ ಬೇಜವಾಬ್ದಾರಿಗಳಿಂದ ಪ್ರಕರಣಗಳನ್ನು ಮುಚ್ಚಿ ಹಾಕುವ ಪ್ರಯತ್ನಗಳು ನಡೆಯುತ್ತಿವೆ ರಾಜ್ಯ ಸರ್ಕಾರ ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗುವ ಕಾನೂನು ರೂಪಿಸಬೇಕು, ಘಟನೆಯಲ್ಲಿ ನೊಂದ ಕುಟುಂಬಗಳಿಗೆ ಸೂಕ್ತ ಪೊಲೀಸ್ ರಕ್ಷಣೆನೀಡಬೇಕು.
ಸ್ಲಂ ಮಹಿಳಾ ಸಮಿತಿ ಅಧ್ಯಕ್ಷ ಉಮಾದೇವಿ ಕಾತರಕಿ, ಕಾರ್ಯದರ್ಶಿ ತಿಪ್ಪವ್ವ ಮುಟಗಾರ, ಉಪಾಧ್ಯಕ್ಷೆ ನಜಮುನ್ನಿಸಾ ಮುರಗೋಡ, ಆರತಿ ಎನ್, ಸಹ ಕಾರ್ಯದರ್ಶಿ ಪರವೀನ ಬಡಿಗೇರ, ರಾಧಾ ಬೋಡಗಲ್ಲ, ಗೌರಮ್ಮ ಶಿರಗುಪ್ಪಿ, ಕಮಲಾ ಚಲವಾದಿ, ವಿಶಾಲಕ್ಷಿ ಹಿರೇಗೌಡ್ರ, ಶಬಾನಾ ಮುಳಗುಂದ, ದೇವಕ್ಕ ತಳವಾರ, ಸೊಫಿಯಾ ಹರ್ಲಾಪೂರ, ಮರ್ದಾನಬಿ ಬಳ್ಳಾರಿ, ರೇಣುಕಾ ಪಾಟೀಲ, ಬಸಮ್ಮ ಕುಟ್ರಶೆಟ್ರ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement