ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಎನ್‌ಸಿಸಿ ವಿದ್ಯಾರ್ಥಿಗಳಿಗೆ ಸೇನೆಯಲ್ಲಿ ಹೆಚ್ಚಿನ ಅವಕಾಶ

Lingaraj Badiger
Updated On : 23 Jul 2014, 11:03 am

ಲಕ್ಷ್ಮೇಶ್ವರ:  ಎನ್‌ಸಿಸಿಯು ವಿದ್ಯಾರ್ಥಿಗಳಲ್ಲಿ ಧೈರ್ಯ, ಸ್ಥೈರ್ಯ ತುಂಬುವ ಕಾರ್ಯ ಮಾಡುತ್ತಿದೆ. ವಿದ್ಯಾರ್ಥಿಗಳು ದೇಶದ ಭವಿಷ್ಯದ ರೂವಾರಿಗಳಾಗಿದ್ದು, ಎನ್‌ಸಿಸಿಯು ನಿಮಗೆ ಎಲ್ಲ ರೀತಿಯ ಅವಕಾಶಗಳನ್ನು ನೀಡುವುದು ಎಂದು ಗದಗ ಎನ್‌ಸಿಸಿಯ 38ನೇ ಬಟಾಲಿಯನ್ ಲೆ. ಕಮಾಂಡರ್ ಸಮೀರ ಮಾಲೆ ಹೇಳಿದರು.
ಅವರು ಸೋಮವಾರ ಪಟ್ಟಣದ ಪುರಸಭೆಯ ಮಹಾವಿದ್ಯಾಲಯದಲ್ಲಿ ಎನ್‌ಸಿಸಿ ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ನಿವೃತ್ತ ಉಪನ್ಯಾಸಕರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಪ್ರೊ. ಎ.ಬಿ. ಶಿವಯ್ಯನಮಠ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಗುಣಗಳನ್ನು ಬೆಳೆಸಿಕೊಂಡು ಸಮಾಜದ ಉತ್ತಮ ನಾಗರಿಕರಾಗಿರಿ ಶಿಕ್ಷಕರಿಗೆ ಗೌರವ ಕೊಡುವ ಗುಣವನ್ನು ಬೆಳೆಸಿಕೊಳ್ಳಬೇಕಾಗಿದೆ ಎಂದರು.
ಪ್ರೊ. ಎನ್.ಎಸ್. ಪಾಟೀಲ, ಪುರಸಭೆಯ ಅಧ್ಯಕ್ಷೆ ಗಂಗಮ್ಮ ಫಕ್ಕೀರಸ್ವಾಮಮಠ, ಉಪಾಧ್ಯಕ್ಷ ಎಂ.ಆರ್. ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.
 ಪ್ರಾಚಾರ್ಯ ಬಿ.ಜೆ. ಲಮಾಣಿ, ಸ್ಥಾಯಿ ಸಮಿತಿ ಅಧ್ಯಕ್ಷ ಗಂಗಾಧರ ಮ್ಯಾಗೇರಿ, ಸದಸ್ಯ ಅನಿಲ ಮುಳಗುಂದ, ಲೆಂಕೆಪ್ಪ ಸೆರಸೂರಿ ಮುಂತಾದವರು ಹಾಜರಿದ್ದರು. ಡಾ. ವಿ.ಎನ್. ನಾಗಶೆಟ್ಟಿ ಸ್ವಾಗತಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement