ಅಭಿವೃದ್ಧಿ ನಿರ್ಲಕ್ಷ್ಯ: ದಂಡಿನ ಆರೋಪ
ನರಗುಂದ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ವರ್ಷ ಗತಿಸಿದರೂ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ. ಅದರಲ್ಲಿ ನರಗುಂದ ಶಾಸಕ ಬಿ.ಆರ್. ಯಾವಗಲ್ ಅಭಿವೃದ್ಧಿ ಕಾರ್ಯಗಳನ್ನು ಮಾಡದೆ ನಿದ್ರಾವಸ್ಥೆಗೆ ಜಾರಿದ್ದಾರೆ ಎಂದು ಗದಗ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ವೈ. ದಂಡಿನ ಆರೋಪಿಸಿದರು. ಅವರು ತಾಲೂಕು ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ವಿಧಾನಸಭಾ ಮತಕ್ಷೇತ್ರದ ರೈತ ಮೋರ್ಚಾ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಸರ್ಕಾರ ಮಾತುಗಳಲ್ಲಿ ಅಭಿವೃದ್ಧಿ ಮಾಡುತ್ತಿದೆ. ಅದರಲ್ಲಿ ನರಗುಂದ ಮತಕ್ಷೇತ್ರದ ಶಾಸಕ ಬಿ.ಆರ್. ಯಾವಗಲ್ ಸಂರ್ಪೂಣವಾಗಿ ಅಭಿವೃದ್ಧಿ ಕಾರ್ಯಗಳನ್ನು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದರು. ಬಿಜೆಪಿಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಬಸವಣ್ಣಪ್ಪ ಚಿಂಚಲಿ, ತಾಲೂಕು ಅಧ್ಯಕ್ಷ ಅಂದಾನಗೌಡ ಮೇಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.