ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ

Lingaraj Badiger
Updated On : 26 Jul 2014, 10:54 am

ಗದಗ: ಕೊಲೆ ಆರೋಪಿ ಬಸವರಾಜ ಯಲ್ಲಪ್ಪ ಹೂಗಾರನಿಗೆ ಶುಕ್ರವಾರ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ರು. 5 ಸಾವಿರ ದಂಡ ಹಾಗೂ ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಇನ್ನುಳಿದ ಇಬ್ಬರನ್ನು ಬಿಡುಗಡೆಗೊಳಿಸಿ ತೀರ್ಪು ಪ್ರಕಟಿಸಿದೆ.  ಜಿಲ್ಲೆಯ ರೋಣ ತಾಲೂಕಿನ ನರೇಗಲ್ಲ ಸಮೀಪದ ಹೊಸಳ್ಳಿ ಗ್ರಾಮದಲ್ಲಿ 2013ರ ಜನವರಿ 19ರಂದು ಎರಡು ಕುಟುಂಬದ ಮಧ್ಯೆ ಮನೆಯ ಮುಂದೆ ಹಾಸಿಗೆಗಳನ್ನು ತೊಳೆದು ಹಾಕುವ ನೆಪದಲ್ಲಿ ಮಾಟ ಮಂತ್ರ ಮಾಡುತ್ತಾರೆ ಎನ್ನುವ ಕ್ಷುಲ್ಲಕ ಕಾರಣಕ್ಕಾಗಿ ತಂಟೆ ಪ್ರಾರಂಭವಾಗಿ ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಈ ವೇಳೆಯಲ್ಲಿ ರೇಣವ್ವ ರಾಮಪ್ಪ ದಳವಾಯಿ ಎನ್ನುವ ಮಹಿಳೆಗೆ ಆರೋಪಿ ಬಸವರಾಜ ಯಲ್ಲಪ್ಪ ಹೂಗಾರ ಕೊಡಲಿ ಕಾವಿನಿಂದ ತಲೆಗೆ ಜೋರಾಗಿ ಹೊಡೆದ ಹಿನ್ನೆಲೆಯಲ್ಲಿ ರೇಣವ್ವ ತೀವ್ರ ಗಾಯಗೊಂಡು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದಳು. ಈ ಕುರಿತು ಪ್ರಕರಣ ದಾಖಲಾಗಿ ವಿಚಾರಣೆ ನಡೆದಿದ್ದು, ಶುಕ್ರವಾರ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಂಬಾದಾಸ ಕುಲಕರ್ಣಿ ಜೀವಾವಧಿ ಶಿಕ್ಷೆ ಹಾಗೂ 5 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾಗಿ ಎಲ್.ಎಸ್. ಸುಳ್ಳದ ವಾದ ಮಂಡಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement