ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಬಳ್ಳಾರಿ ಉಪಚುನಾವಣೆ ಟಿಕೆಟ್ ನಿರ್ಧಾರ ವರಿಷ್ಠರಿಗೆ ಬಿಟ್ಟಿದ್ದು

Lingaraj Badiger
Updated On : 26 Jul 2014, 11:07 am

ಕನ್ನಡಪ್ರಭ ವಾರ್ತೆ, ಗದಗ, ಜು. 25
ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ವಿಧಾನಸಭೆ ಉಪಚುನಾವಣೆ ಟಿಕೆಟ್ ಹಂಚಿಕೆ ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರವಾಗಿದೆ ಎಂದು ಬಳ್ಳಾರಿ ಸಂಸದ ಬಿ. ಶ್ರೀರಾಮುಲು ಹೇಳಿದರು.
ಶುಕ್ರವಾರ ರಾತ್ರಿ ಗದಗ ನಗರದಲ್ಲಿ ಆಯೋಜಿಸಲಾಗಿದ್ದ ಇಫ್ತಾರ್ ಕೂಟದಲ್ಲಿ ಪಾಲ್ಗೊಳ್ಳುವ ಮೊದಲು ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಸದ್ಯ ರಾಜ್ಯದಲ್ಲಿ ನಡೆಯಲಿರುವ 3 ವಿಧಾನಸಭೆಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲವು ಸಾಧಿಸುವುದು  ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಟಪಾಲ್ ಗಣೇಶ ಅವರು ಲೋಕಾಯುಕ್ತ ವರದಿ ವಿಚಾರವಾಗಿ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ, ನನಗೆ ಆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದರು.
ಬಳ್ಳಾರಿಯ ಗಡಿ ವಿಷಯದ ಕುರಿತ ಪ್ರಶ್ನೆಗೂ ನನಗೆ ಹೆಚ್ಚಿನ ಮಾಹಿತಿ ಇಲ್ಲ ಎಂದರು.
ರಾಜ್ಯದಲ್ಲಿ ನಡೆಯುತ್ತಿರುವ ಅತ್ಯಾಚಾರ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆಡಳಿತ ವೈಖರಿಯನ್ನು ಕಟುವಾಗಿ ಟೀಕಿಸಿದರು. ಈ ಸಂದರ್ಭದಲ್ಲಿ ಅವರ ಅಭಿಮಾನಿಗಳು, ಕಾರ್ಯಕರ್ತರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement