ಭಾಗ್ಯಲಕ್ಷ್ಮೀ ಬಾಂಡ್ ವಿತರಿಸಲು ಆಗ್ರಹ
ನರಗುಂದ: ತಾಲೂಕಿನ ಶಿರೋಳ ಗ್ರಾಪಂ ಆವರಣದಲ್ಲಿ ಶುಕ್ರವಾರ ಗ್ರಾಮಸಭೆ ಜರುಗಿತು. ಈ ಸಂದರ್ಭದಲ್ಲಿ ಗ್ರಾಮಸ್ಥರು ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿಗಳು, ಕೇವಲ ಕನ್ನಡ ಮಾಧ್ಯಮದಲ್ಲಿ ಕಲಿಯುವ ಮಕ್ಕಳಗೆ ಮಾತ್ರ ಭಾಗ್ಯಲಕ್ಷ್ಮೀ ಬಾಂಡ್ ನೀಡುವುದರಿಂದ ಆಂಗ್ಲ ಮಾಧ್ಯಮದಲ್ಲಿ ಕಲಿಯುವ ಬಡ ಮಕ್ಕಳಿಗೆ ಅನ್ಯಾಯವಾಗುತ್ತದೆ. ಹಾಗಾಗಿ ಮುಂದಿನ ದಿನಗಳಲ್ಲಿ ಎಲ್ಲ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಕಲೆಯುವ ಬಡ ಮಕ್ಕಳಿಗೆ ಭಾಗ್ಯಲಕ್ಷ್ಮೀ ಬಾಂಡ್ ನೀಡಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಪ್ರಭಾರಿ ಶಿಶು ಅಭಿವೃದ್ಧಿ ಅಧಿಕಾರಿ ಮುದರಡ್ಡಿ ಮಾತನಾಡಿ ಹಲವಾರು ವಿಷಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಕಮಲವ್ವ ಚಂಗಳಿ, ಸದಸ್ಯೆ ಮಹಾದೇವಿ ಮಠದ, ಪ್ರಭಯ್ಯ ಅಂಕಲಿಮಠ, ಗುರುಬಸಯ್ಯ ನಾಗಲೋಟಿಮಠ, ಈರಪ್ಪ ಕಾಡಪ್ಪನವರ, ಮಲ್ಲಪ್ಪ ಚಿಕ್ಕನರಗುಂದ, ಇಮಾಸಾಬ ಇದ್ದರು.