ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಡೆಂಘೀ ಜ್ವರ ನಿಯಂತ್ರಣದಲ್ಲಿ ಸಮುದಾಯ ಪಾತ್ರ ಮುಖ್ಯ

Lingaraj Badiger
Updated On : 28 Jul 2014, 10:44 am

ನರೇಗಲ್ಲ: ಚಿಕೂನ್‌ಗುನ್ಯಾ, ಡೆಂಘೀ ಜ್ವರ ಈಡೀಜ ಇಜಿಫ್ತ್ ಸೊಳ್ಳೆ ಕಚ್ಚುವುದರಿಂದ ಬರುತ್ತವೆ. ಸೊಳ್ಳೆಗಳ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ ಎಂದು ಜಕ್ಕಲಿ ಗ್ರಾಪಂ ಅಧ್ಯಕ್ಷ ಎಂ.ಎಂ. ಮೇಟಿ ತಿಳಿಸಿದರು.
ಈಚೆಗೆ ಸಮೀಪದ ಜಕ್ಕಲಿ ಗ್ರಾಮದ ಎಸ್.ಎ.ಜೆ.ಡಿ. ಸರ್ಕಾರಿ ಪ್ರೌಢಶಾಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ನರೇಗಲ್ಲ, ಉಪಕೇಂದ್ರ ಜಕ್ಕಲಿ ಆಶ್ರಯದಲ್ಲಿ ಏರ್ಪಡಿಸಿದ್ದ ಗ್ರಾಪಂ ಮಟ್ಟದ ಡೆಂಘೀ ವಿರೋಧಿ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಿ ಎಂದರು.
ಗದಗ ಸಹಾಯಕ ಕೀಟ ತಜ್ಞೆ ಅನ್ನಪೂರ್ಣಾ ಶೆಟ್ಟರ್ ಮಾತನಾಡಿ, ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಲಿದ್ದು, ಮನೆಯಲ್ಲಿ ನೀರಿನ ಪರಿಕರಗಳನ್ನು ವಾರಕ್ಕೆ 2 ಬಾರಿ ಸ್ವಚ್ಛವಾಗಿ ತೊಳೆದು ಅವುಗಳನ್ನು ಭದ್ರವಾಗಿ ಮುಚ್ಚಿಡಿ. ತೆಂಗಿನ ಕಾಯಿ ಚಿಪ್ಪು, ಪ್ಲಾಸ್ಟಿಕ್ ಲೋಟ, ಟೈರ್‌ನಂಥ ವಸ್ತುಗಳಲ್ಲಿ ನೀರು ನಿಲ್ಲದಂತೆ ಪ್ರತಿಯೊಬ್ಬರೂ ನೋಡಿಕೊಳ್ಳಬೇಕೆಂದರು.
ಗದಗ ಹಿರಿಯ ಆರೋಗ್ಯ ಸಹಾಯಕ ಆರ್.ವಿ. ಕುಪ್ಪಸ್ತ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖೋಪಾಧ್ಯಾಯ ಆರ್.ಜಿ. ಸೊಟಬಸಪ್ಪನವರ ಅಧ್ಯಕ್ಷತೆ ವಹಿಸಿದ್ದರು. ರೋಣ ಹಿರಿಯ ಆರೋಗ್ಯ ಸಹಾಯಕ ಎಸ್.ಎನ್. ಪಾಟೀಲ, ಕಿರಿಯ ಆರೋಗ್ಯ ಸಹಾಯಕ ಎಫ್.ವೈ. ಬಾರಿಕಾಯಿ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಎಸ್.ವಿ. ಹಿರೇವಡಯರ, ಡಾ. ಅನ್ವರ ಸಾಮುದ್ರಿ, ಆಶಾ ಕಾರ್ಯಕರ್ತೆಯರು, ಪ್ರೌಢಶಾಲೆ ಶಿಕ್ಷಕರು ಹಾಗೂ ಸರ್ಕಾರಿ ಬಾಲಕರ ವಸತಿ ನಿಲಯ ಸಿಬ್ಬಂದಿ ಉಪಸ್ಥಿತರಿದ್ದರು. ಶಿಕ್ಷಕ ವೀರೇಶ ತಳವಾರ ಸ್ವಾಗತಿಸಿದರು. ಎಸ್.ಎಫ್. ಅಂಗಡಿ ನಿರೂಪಿಸಿದರು. ಬಿ.ವಿ.ಬಳಗೇರ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement