ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಶೌಚಾಲಯ ನಿರ್ಮಿಸಿ: ಮುಂಡರಗಿ ಸಲಹೆ

Lingaraj Badiger
Updated On : 28 Jul 2014, 10:41 am

ಗದಗ:  ಶೌಚಾಲಯಗಳನ್ನು ನಿರ್ಮಿಸಿಕೊಳ್ಳದೇ ಇರುವ ಕುಟುಂಬಗಳು ಕೂಡಲೇ ಶೌಚಾಲಯಗಳನ್ನು ನಿರ್ಮಿಸಿಕೊಳ್ಳುವುದರ ಜತೆಯಲ್ಲಿ ಗ್ರಾಮದ ಪರಿಸರವನ್ನು ಸ್ವಚ್ಛವಾಗಿಡಲು ಸಹಕಾರ ನೀಡಬೇಕೆಂದು ಗ್ರಾಮಸಭೆ ನೋಡಲ್ ಅಧಿಕಾರಿ ಸಿ.ಆರ್. ಮುಂಡರಗಿ ಹೇಳಿದರು.ಅವರು ಶುಕ್ರವಾರ ತಾಲೂಕಿನ ಅಡವಿಸೋಮಾಪುರ ಗ್ರಾಮದ ಗೋಣಿ ಬಸವೇಶ್ವರ ದೇವಸ್ಥಾನದಲ್ಲಿ ಸ್ಥಳೀಯ ಗ್ರಾಪಂನ 2014-15ನೇ ಸಾಲಿನ ಮೊದಲ ಸುತ್ತಿನ ಗ್ರಾಮಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಗ್ರಾಮದ ಪ್ರತಿಯೊಬ್ಬರು ಶೌಚಾಲಯ ಬಳಸಿ, ಬಯಲು ಶೌಚ ಸಂಸ್ಕೃತಿ ಕಡ್ಡಾಯವಾಗಿ ತಪ್ಪಿಸಿ, ಗ್ರಾಮದಲ್ಲಿ ಈಗಾಗಲೇ ನೂರಾರು ಕುಟುಂಬಗಳು ಶೌಚಾಲಯಗಳನ್ನು ನಿರ್ಮಿಸಿದ್ದು, ಇನ್ನೂ ಬಾಕಿ ಇರುವ ಕುಟುಂಬಗಳು ಕೂಡಲೇ ಶೌಚಾಲಯಗಳನ್ನು ನಿರ್ಮಿಸಿಕೊಳ್ಳುವುದರ ಜತೆಯಲ್ಲಿ ಗ್ರಾಮದ ಪ್ರತಿಯೊಬ್ಬರೂ ಶೌಚಾಲಯಗಳನ್ನು ಬಳಸಿ ಗ್ರಾಮದ ಪರಿಸರವನ್ನು ಸ್ವಚ್ಛವಾಗಿಡಬೇಕು ಎಂದರು.
ತಾಪಂ ಸದಸ್ಯ ಪ್ರಹ್ಲಾದ ಹೊಸಳ್ಳಿ, ಎಂ.ಎಸ್. ಹಿರೇಮಠ, ಬಿ.ಟಿ. ಕಿತ್ತೂರ, ಎಸ್.ಎಂ. ಲಮಾಣಿ, ಗ್ರಾಮ ಲೆಕ್ಕಾಧಿಕಾರಿ ಎಸ್.ಐ. ಸತ್ತಿಗೇರಿ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಬಿ.ಎಸ್. ಭಜಂತ್ರಿ, ಪಿಡಿಒ ಅಶ್ವಿಸಿ ಕುರಡಗಿ, ಉಪಾಧ್ಯಕ್ಷೆ ನಾಗವ್ವ ಹುಡೇದ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement