ಗದಗ

ಅತ್ಯುತ್ತಮ ಫಲಿತಾಂಶ

ನರೇಗಲ್ಲ:  ಸ್ಥಳೀಯ ಅನ್ನದಾನೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಈಚೆಗೆ ಜರುಗಿದ 2013-14ನೇ ಸಾಲಿನ ಬಿಎ, ಬಿಎಸ್ಸಿ, ಬಿಕಾಂ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
 ಬಿಎ ವಿಭಾಗದಲ್ಲಿ ಶರಣಪ್ಪ ಮುಗಳಿ ಶೇ. 81.66 ಅಂಕಪಡೆದು ಪ್ರಥಮ, ಲಕ್ಷ್ಮೀ ಗೌಡರ 81.50 ಅಂಕದೊಂದಿಗೆ ದ್ವಿತೀಯ ಹಾಗೂ ಏಕನಗೌಡ ದ್ಯಾಮನಗೌಡ್ರ 80.25 ಅಂಕದೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಅನಿತಾ ಯಾಳಗಿ ಶೇ. 91.33 ಅಂಕ ಪಡೆದು ಪ್ರಥಮ ಸ್ಥಾನ, ಅಜೀದಾಬೇಗಂ ಕುದರಿ ಶೇ. 84.66 ಅಂಕ ಪಡೆದು ದ್ವಿತೀಯ ಹಾಗೂ ವೀರೇಶ ಕೊಟಗಿ ಶೇ. 83.33 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾನೆ. ವಾಣಿಜ್ಯ ವಿಭಾಗದಲ್ಲಿ ಶ್ರೀದೇವಿ ನಾಶಿಪುಡಿ ಶೇ. 86.11 ಅಂಕ ಪಡೆದು ಪ್ರಥಮ, ಸುಜಾತ ಕೊತಬಾಳ ಶೇ. 79.36 ಅಂಕ ಪಡೆದು ದ್ವಿತೀಯ ಹಾಗೂ ಪ್ರಶಾಂತಗೌಡ ಅಯ್ಯನಗೌಡ್ರ ಶೇ. 78.30 ಅಂಕ ಪಡೆದು ತೃತಿಯ ಸ್ಥಾನ ಪಡೆದಿದ್ದಾರೆ. ಅತ್ಯುತ್ತಮ ಸಾಧನೆಗೈದ ಮಕ್ಕಳಿಗೆ ಡಾ. ಅಭಿನವ ಅನ್ನದಾನ ಶ್ರೀಗಳು, ಆಡಳಿತಾಧಿಕಾರಿ ಎಸ್.ಜಿ. ಹಿರೇಮಠ, ಪ್ರಾಚಾರ್ಯ ಡಾ. ಅರವಿಂದ ಸಜ್ಜನ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ.
ಪತ್ರಕರ್ತರ ಮಾಸಾಶನ ಹೆಚ್ಚಳ
ಗದಗ:  ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ಈಗಿರುವ ಮಾಸಾಶನದ ಮೊತ್ತವನ್ನು ರು. 3 ಸಾವಿರದಿಂದ 6 ಸಾವಿರಕ್ಕೆ ಹೆಚ್ಚಿಸಿ ತಕ್ಷಣದಿಂದ ಜಾರಿ ಬರುವಂತೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಮಾಡಿದ್ದ ಘೋಷಣೆಯನ್ವಯ ಪತ್ರಕರ್ತರ ಮಾಸಾಶನ ಹೆಚ್ಚಿಸಲಾಗಿದೆ ಎಂದು ವಾರ್ತಾ ಇಲಾಖೆಯ ಪ್ರಕಟಣೆ ತಿಳಿಸಿದೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ

ಸ್ಟಿಂಗ್‌ ಆಪರೇಷನ್‌ ಬಗ್ಗೆ ಬೇರೆಯವರು ಮಾತನಾಡುವ ಆಗಿಲ್ಲ ಎನ್ನಲು ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್‌ ಖರ್ಗೆ..?

1 ವರ್ಷ ಗ್ಯಾರಂಟಿ ಯೋಜನೆಗಳ ನಿಲ್ಲಿಸಿ, ಹಣವನ್ನು ರೈತರಿಗೆ ನೀಡಿ: ರಾಜ್ಯ ಸರ್ಕಾರಕ್ಕೆ ದಿಂಗಾಲೇಶ್ವರ ಶ್ರೀಗಳ ಆಗ್ರಹ

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ 18 ನಿಮಿಷದಲ್ಲಿ ಜೀವಂತ ಹೃದಯ ಸಾಗಾಟ!