ವಿದ್ಯಾರ್ಥಿ ಜೀವನ ಸದುಪಯೋಗ ಪಡಿಸಿಕೊಳ್ಳಿ: ಅರವಟಗಿಮಠ
ನರೇಗಲ್ಲ: ಜೀವನದಲ್ಲಿ ಒಮ್ಮೆ ಮಾತ್ರ ಬರುವಂತಹ ವಿದ್ಯಾರ್ಥಿ ಜೀವನವನ್ನು ನೀವು ಸದುಪಯೋಗಪಡಿಸಿಕೊಳ್ಳಬೇಕು. ವಿದ್ಯಾರ್ಥಿ ದೆಸೆಯಿಂದಲೇ ಸಾಮಾಜಿಕ ಸೇವೆ ಮಾಡುವ ಗುಣ ಅಳವಡಿಸಿಕೊಳ್ಳಬೇಕು. ಅದನ್ನು ಎನ್‌ಎಸ್‌ಎಸ್ ಕಲಿಸಿಕೊಡುತ್ತದೆ. ಎನ್‌ಎಸ್‌ಎಸ್ ಕಾರ್ಯಕರ್ತರಾಗಿರಲು ಹೆಮ್ಮೆ ಪಡಬೇಕೆಂದು ನಿವೃತ್ತ ಪ್ರಾಚಾರ್ಯ ಡಿ.ಎ. ಅರವಟಗಿಮಠ ಹೇಳಿದರು. ಅವರು ಈಚೆಗೆ ಸ್ಥಳೀಯ ಅನ್ನದಾನೇಶ್ವರ ಪಪೂ ಮಹಾವಿದ್ಯಾಲಯದಲ್ಲಿ ಎನ್‌ಎಸ್‌ಎಸ್ ಘಟಕ ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾ. ವೈ.ಸಿ. ಪಾಟೀಲ ಮಾತನಾಡಿ, ಎನ್‌ಎಸ್‌ಎಸ್ ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವ ಗುಣ ಹಾಗೂ ವ್ಯಕ್ತಿತ್ವ ವಿಕಸನ ಗುಣ ಹೊಂದಲು ಸಹಾಯಕವಾಗಲಿದೆ ಎಂದರು. ಎನ್‌ಎಸ್‌ಎಸ್ ಅಧಿಕಾರಿ ಪಿ.ವೈ. ಕರಮುಡಿ, ಎ.ಎಂ. ನದಾಫ, ಎಂ.ಎಸ್. ಹೊನವಾಡ ಇದ್ದರು.