ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಸ್ವಯಂ ಉದ್ಯೋಗಕ್ಕೆ ಅರ್ಜಿ ಆಹ್ವಾನ

Rashmi Kasaragodu
Updated On : 29 Jul 2014, 11:22 am


ಗದಗ:  ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿಗಾಗಿ ಪರಿಶಿಷ್ಟ ಜಾತಿ ಅರ್ಹ ಫಲಾನುಭವಿಗಳಿಗೆ ಸ್ವಯಂ ಉದ್ಯೋಗ ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಭೂ ಒಡೆತನ ಯೋಜನೆ, ಸಫಾಯಿ ಕರ್ಮಚಾರಿ ಪುನರ್ ವಸತಿ ಯೋಜನೆ ಹಾಗೂ ಮೈಕ್ರೊ ಕ್ರೆಡಿಟ್ ಕಿರುಸಾಲ ಯೋಜನೆಗಳಡಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹಿಂದೆ ಇಂತಹ ಸವಲತ್ತು ಪಡೆದವರು ಅರ್ಜಿ ಸಲ್ಲಿಸುವಂತಿಲ್ಲ. ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿ ಆಯಾ ತಾಲೂಕಿನ ಸಮಾಜ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿನ ನಿಗಮದ ಅಧಿಕಾರಿಗಳಿಂದ ಪಡೆಯಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.

ಪಿಒಪಿ ಗಣಪತಿ ತಯಾರಿಕೆ ಮಾರಾಟ ನಿಷೇಧ
ಗದಗ:  ಪ್ಲಾಸ್ಟರ್ ಆಫ್ ಪ್ಯಾರೀಸ್ ಬಳಸಿ ತಯಾರಿಸಿದ ಗಣಪತಿ ವಿಗ್ರಹಗಳಿಂದ ಪರಿಸರ ಹಾಗೂ ಸಾರ್ವಜನಿಕ ಆರೋಗ್ಯಕ್ಕೆ ಹಾನಿ ಉಂಟುಮಾಡುವ ಹಿನ್ನೆಲೆಯಲ್ಲಿ ವಿಷಕಾರಿ ರಾಸಾಯನಿಕ ಲೋಹ ಲೇಪದ ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶ ಮೂರ್ತಿ ತಯಾರಿಕೆಯನ್ನು ನಿಷೇಧಿಸಲಾಗಿದೆ. ಇದನ್ನು ಉಲ್ಲಂಘಿಸಿದಲ್ಲಿ ಅಂತಹ ಮೂರ್ತಿ ತಯಾರಕರ ಹಾಗೂ ಮಾರಾಟಗಾರರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎನ್.ಎಸ್.ಪ್ರಸನ್ನಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement