ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಅತಿಥಿ ಉಪನ್ಯಾಸಕರಿಗೆ ವೇತನ ಹೆಚ್ಚಿಸದಿದ್ದರೆ ಮತ್ತೆ ಹೋರಾಟ: ಕಲ್ಮನಿ

Mainashree
Updated On : 1 Aug 2014, 10:07 am

ಗದಗ: ಅತಿಥಿ ಉಪನ್ಯಾಸಕರಿಗೆ ಭದ್ರತೆ ಹಾಗೂ ವೇತನ ಹೆಚ್ಚಳ ಮಾಡದಿದ್ದರೆ ಮತ್ತೆ ಹೋರಾಟಕ್ಕೆ ಇಳಿಯುತ್ತೇವೆ ಎಂದು ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಹನುಮಂತಗೌಡ ಕಲ್ಮನಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, 10-15 ವರ್ಷಗಳಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಅಲ್ಪ ವೇತನದಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತ ಬರುತ್ತಿದ್ದೇವೆ. ಆದರೆ, ನಮ್ಮ ಬೇಡಿಕೆಗಳಾದ ಭದ್ರತೆಯನ್ನು ನೀಡುವುದು ಮತ್ತು ವೇತನ ಹೆಚ್ಚಳ ಮಾಡುವುದು ಮತ್ತು ಪ್ರತಿ ತಿಂಗಳ ವೇತನ ನೀಡಬೇಕು. ಈ ಎಲ್ಲ ಬೇಡಿಕೆಗಳು ಈಡೇರಿಸುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವರು ಸುಳ್ಳು ಭರವಸೆ ನೀಡುತ್ತ ಹೊರಟಿರುವುದು ಖಂಡನೀಯ. ಪದವಿ ಕಾಲೇಜುಗಳಿಗೆ ಸಿಇಟಿ ಮೂಲಕ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದು ಕಳೆದು 1 ವರ್ಷದಿಂದ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಹೇಳುತ್ತಾ ಬರುತ್ತಿದ್ದಾರೆ. ಆದರೂ ನೇಮಕಾತಿ ಮಾಡಿಕೊಳ್ಳುವುದು ಯಾವಾಗ  ಎಂಬುದನ್ನು ಸ್ಪಷ್ಟಪಡಿಸಬೇಕು. ಈ ಅತಿಥಿ ಉಪನ್ಯಾಸಕರಲ್ಲಿ ಕೆಲವು ಉಪನ್ಯಾಸಕರ ವಯೋವುತಿ ಮೀರುತ್ತಿದ್ದು, ಅವರ ತಮ್ಮ ಮುಂದಿನ ಭವಿಷ್ಯದ ಬಗ್ಗೆ ಚಿಂತತರಾಗಿ ಆತಂಕಗೊಂಡಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರು ಕಾಯಂ ನೇಮಕಾತಿ ಮಾಡುವಾಗ ಅತಿಥಿ ಉಪನ್ಯಾಸಕರಿಗೆ ನ್ಯಾಯ ಒದಗಿಸಿ ಅವರ ಸೇವೆಯನ್ನು ಕಾಯಂಗೊಳಿಸಿ. ಈ ಹಿಂದೆ ಸುಳ್ಳು ಪಿಎಚ್‌ಡಿ ಪದವಿಗಳನ್ನು ನೀಡಿ ಮತ್ತು ಅನುದಾನ ರಹಿತ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದವರಿಗೂ ಕೃಪಾಂಕ ನೀಡಿ ನೇಮಕಾತಿ ಮಾಡಿಕೊಂಡಿದ್ದೀರಿ. ಆದರೆ, ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವಂತಹ ಅತಿಥಿ ಉಪನ್ಯಾಸಕರನ್ನು ಪ್ರಥಮ ಆದ್ಯತೆ ನೀಡಿ ನೇಮಕ ಮಾಡಿಕೊಳ್ಳಬೇಕೆಂದು ಹನುಮಂತಗೌಡ ಕಲ್ಮನಿ ಸರ್ಕಾರವನ್ನು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement