ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಪಂಚಮಸಾಲಿ ಮುಖಂಡರಿಗೆ ಸಚಿವ ಸ್ಥಾನ ನೀಡಿ

Mainashree
Updated On : 9 Jun 2014, 11:14 am

ಮುಂಡರಗಿ: ವರ್ಷದಿಂದ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಜೂ. 23ರಿಂದ ಆರಂಭವಾಗಲಿರುವ ಆಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆ ಮಾಡುವ ಹಿನ್ನೆಲೆಯಲ್ಲಿ ಪಂಚಮಸಾಲಿ ಸಮಾಜದ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂದು ಮುಂಡರಗಿ ಪಪಂ ಮಾಜಿ ಅಧ್ಯಕ್ಷ ಹಾಗೂ ಪಂಚಮಸಾಲಿ ಮುಖಂಡ ಶಂಕ್ರಪ್ಪ ಬಾರಿಕಾಯಿ ಆಗ್ರಹಿಸಿದ್ದಾರೆ.
ಭಾನುವಾರ ಮುಂಡರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಚಿಕ್ಕೋಡಿಯಿಂದ ಸಂಸದರಾಗಿ ಆಯ್ಕೆಯಾಗಿರುವ ಪ್ರಕಾಶ ಹುಕ್ಕೇರಿ ರಾಜಿನಾಮೆಯಿಂದ ಸಚಿವ ಸಂಪುಟದಲ್ಲಿ ಪಂಚಮಸಾಲಿ ಸಮಾಜ ಪ್ರತಿನಿಧಿಸುವ ಸಚಿವರು ಇಲ್ಲದಂತಾಗಿದೆ. ಕರ್ನಾಟಕದಲ್ಲಿ ಪಂಚಮಸಾಲಿ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಮಂತ್ರಿ ಮಂಡಳದಲ್ಲಿ ಕನಿಷ್ಠ ಇಬ್ಬರಿಗೆ ಸಚಿವ ಸ್ಥಾನ ನೀಡಬೇಕೆಂದು ಬಾರಿಕಾಯಿ ಒತ್ತಾಯಿಸಿದರು.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರಪ್ಪ ಅವರಿಗೆ ಪತ್ರ ಬರೆದು ಒತ್ತಾಯಿಸಲಾಗಿದೆ. ಶಾಸಕ ವಿನಯ ಕುಲಕರ್ಣಿ ಮತ್ತು ಶಿವಾನಂದ ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಿ ಪಂಚಮಸಾಲಿ ಸಮಾಜದ ಬೇಡಿಕೆ ಈಡೇರಿಸಬೇಕೆಂದು ಪತ್ರದಲ್ಲಿ ಒತ್ತಾಯಿಸಿರುವುದಾಗಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement