ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ರಾಜೂರು ಗ್ರಾಪಂ ಅವ್ಯವಹಾರ: ಕಾಮಗಾರಿ ಪರಿಶೀಲನೆ

Vishwanath S
Updated On : 13 Jun 2014, 11:27 am

ಗಜೇಂದ್ರಗಡ: ಸಮೀಪದ ರಾಜೂರು ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದೆಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಆರೋಪಿಸಿದ್ದ ಹಿನ್ನೆಲೆಯಲ್ಲಿ ಜಿಲ್ಲಾ ತನಿಖಾ ತಂಡ ಗುರುವಾರ ಗ್ರಾಪಂ ವ್ಯಾಪ್ತಿಯ ರೈತರ ಹೊಲವೊಂದರಲ್ಲಿ ಕಾಮಗಾರಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಜಲಾನಯನ ಇಲಾಖೆಯ ಅಧಿಕಾರಿ ಎಸ್.ಬಿ. ಕಾಶಪ್ಪನವರ ಮಾತನಾಡಿ, ರಾಜೂರು ಗ್ರಾಪಂ ವ್ಯಾಪ್ತಿಗೊಳಪಡುವ ದಿಂಡೂರ, ಕಾಲಕಾಲೇಶ್ವರ, ಬೈರಾಪುರ, ಬೈರಾಪುರ ತಾಂಡಾ, ರಾಜೂರ ಗ್ರಾಮಗಳಿಗೆ ಸರ್ಕಾರ ನೀಡಿದ ಅನುದಾನ ಸಮರ್ಪಕವಾಗಿ ಬಳಕೆಯಾಗದೇ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆಂದು ಸಂಘಟನೆಗಳ ನೇತೃತ್ವದಲ್ಲಿ ಗ್ರಾಮಸ್ಥರು ಗ್ರಾಪಂ ಕಚೇರಿಗೆ ಬೀಗ ಜಡಿದು ಧರಣಿ ಸತ್ಯಾಗ್ರಹ ಕೈಗೊಂಡಿದ್ದರ ಪರಿಣಾಮ ಜಿಲ್ಲಾಡಳಿತ ರಾಜೂರು ಗ್ರಾಪಂನಲ್ಲಿ ನಡೆದಿದೆನ್ನಲಾದ ಅಕ್ರಮಗಳ ತನಿಖೆಗಾಗಿ 4 ತಂಡ ರಚಿಸಿ ಕಾಮಗಾರಿ ಕಡತಗಳನ್ನು ಪರಿಶೀಲಿಸಲಾಗಿದೆ. 2010-11, 2011-12 ಹಾಗೂ 2013-14ರಲ್ಲಿ ಸರ್ಕಾರದಿಂದ ಬಿಡುಗಡೆಯಾದ ಅನುದಾನದಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳ ಕಡತ ಪರಿಶೀಲನೆಯನ್ನು ಕಡತಗಳೊಂದಿಗೆ ಕಾಮಗಾರಿ ನಡೆದ ಗ್ರಾಮಗಳಿಗೆ ತೆರಳಿ ಖುದ್ದು ಪರಿಶೀಲನೆ ನಡೆಸಿ ವಾಸ್ತವ ವರದಿ ಸಲ್ಲಿಸಬೇಕೆಂಬ ಜಿಲ್ಲಾಡಳಿತದ ನಿರ್ದೇಶನದಂತೆ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಮೇ 29ರಿಂದಲೇ ಕಡತ ಪರಿಶೀಲನೆ ನಡೆಸಿದ್ದೇವೆ. ಈಗಾಗಲೇ ದಿಂಡೂರ, ಕಾಲಕಾಲೇಶ್ವರ, ಬೈರಾಪುರ, ಬೈರಾಪುರ ತಾಂಡಾದಲ್ಲಿನ ಕಾಮಗಾರಿ ಪರಿಶೀಲಿಸಲಾಗಿದೆ. ಅಂತಿಮವಾಗಿ ರಾಜೂರು ಗ್ರಾಮದ ಕಾಮಗಾರಿಗಳನ್ನು ಪರಿಶೀಲಿಸುತ್ತಿದ್ದೇವೆ. ಇನ್ನೇರೆಡು ದಿನಗಳಲ್ಲಿ ಪರಿಶೀಲನಾ ಕಾರ್ಯ ಪೂರ್ಣಗೊಂಡು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಾಗುವುದು ಎಂದರು. ಸಹಾಯಕ ಕೃಷಿ ಅಧಿಕಾರಿ ಬಸವರಾಜ ಮೇಟಿ, ಜಲಾನಯನ ಇಲಾಖೆಯ ತಾಂತ್ರಿಕ ಸಹಾಯಕ ಬಿ.ಎಸ್. ಗದಗಿನ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement