ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಹೃದಯಾಘಾತದಿಂದ ಪೇದೆ ಸಾವು: ನಮನ

Rashmi Kasaragodu
Updated On : 18 Jun 2014, 12:32 pm

ಲಕ್ಷ್ಮೇಶ್ವರ: ಗದಗ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೇದೆ ಶಿವರೆಡ್ಡಿ ಸೋಮರೆಡ್ಡಿ (37) ಹೃದಯಾಘಾತದಿಂದ ಮೃತಪಟ್ಟ ಘಟನೆ ಪಟ್ಟಣದಲ್ಲಿ ಮಂಗಳವಾರ ಬೆಳಗ್ಗೆ ಜರುಗಿದೆ. ಪಟ್ಟಣದಲ್ಲಿ ಕಳೆದೆರಡು ದಿನಗಳಿಂದ ತ್ವೇಷಮಯ ವಾತಾವರಣವಿದ್ದ ಕಾರಣ ಬಂದೋಬಸ್ತ್‌ಗಾಗಿ ಗದಗ ಜಿಲ್ಲಾ ಸಶಸ್ತ್ರ ಮೀಸಲು ತುಕಡಿಯನ್ನು ಕರ್ತವ್ಯದ ಮೇಲೆ ನಿಯೋಜಿಸಲಾಗಿತ್ತು. ಹೃದಯಾಘಾತದಿಂದ ಮೃತಪಟ್ಟ ಪೇದೆ ಇದೆ ತುಕಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸೋಮರೆಡ್ಡಿಯು ಮಂಗಳವಾರ ಬೆಳಗ್ಗೆ ಎದ್ದು ಸ್ನಾನ ಮಾಡಿ ತಿಂಡಿ ತಿನ್ನಲು ಹೋಗುತ್ತಿರುವಾಗ ಪಟ್ಟಣದ ಸೋಮೇಶ್ವರ ಪಾದಗಟ್ಟೆ ಹತ್ತಿರ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಆತನ ಸ್ನೇಹಿತರು ಸಮೀಪದ ಮಲ್ಲಾಡ ನರ್ಸಿಂಗ್ ಹೋಂಗೆ ಕರೆದೊಯ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು ಎನ್ನುವಷ್ಟರಲ್ಲಿ ಪೇದೆ ಮೃತಪಟ್ಟಿರುವ ವಿಷಯವನ್ನು ವೈದ್ಯರು ದೃಢಪಡಿಸಿದರು. ಮೃತ ಪೇದೆಯು ಗದಗ ತಾಲೂಕಿನ ಹರ್ತಿ ಗ್ರಾಮದವನು ಎಂದು ತಿಳಿದು ಬಂದಿದ್ದು, ಮೃತನಿಗೆ ಹೆಂಡತಿ ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಪೇದೆ ಮೃತಪಟ್ಟ ಸುದ್ದಿ ತಿಳಿದ ತಕ್ಷಣ ಶಾಸಕ ರಾಮಕೃಷ್ಣ ದೊಡ್ಡಮನಿ, ಮಾಜಿ ಶಾಸಕ ಜಿ.ಎಂ. ಮಹಾಂತಶೆಟ್ಟರ್, ಜಿ.ಎಸ್. ಗಡ್ಡದೇವರಮಠ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಾಲಕೃಷ್ಣ ಕೆ.ಟಿ, ಡಿವೈಎಸ್‌ಪಿ ವಿಜಯ ಡಂಬಳ, ಸಿಪಿಐ ಶ್ರೀನಿವಾಸ ಮೇಟಿ, ಪಿಎಸ್‌ಐ ವಿಕಾಶ ಲಮಾಣಿ ಪುಷ್ಪಗುಚ್ಚವಿರಿಸಿ ಮೃತರಿಗೆ ನಮನ ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement