ಹೊರಟ್ಟಿ ಪರ ಮತ ಯಾಚನೆ
ಗದಗ: ಯುವ ಜನತೆಯ ಧ್ವನಿ, ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಯುವಕರ ಆಶಾಕಿರಣ ವಸಂತ ಹೊರಟ್ಟಿ ಅವರಿಗೆ ಪ್ರಜ್ಞಾವಂತ ಮತದಾರರು ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ಆಶಿರ್ವದಿಸಬೇಕು ಎಂದು ನಿವೃತ್ತ ಪ್ರಾಧ್ಯಾಪಕ ಎಸ್.ಟಿ. ಬ್ಯಾಕೋಡ ಹೇಳಿದರು.
ತಾಲೂಕಿನ ಲಕ್ಕುಂಡಿ ಗ್ರಾಮದ ಬಿ.ಎಚ್. ಪಾಟೀಲ ಸಂಯುಕ್ತ ಪಪೂ ಕಾಲೇಜಿನಲ್ಲಿ ವಸಂತ ಹೊರಟ್ಟಿ ಪರ ಮತಯಾಚಿಸಿ ಮಾತನಾಡಿದರು.
ಗದಗ ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಡಾ.ಬಸವರಾಜ ಧಾರವಾಡ, ಜಿಲ್ಲಾ ಮಾಧ್ಯಮಿಕ ಶಾಲಾ ನೌಕರರ ಸಂಘದ ಅಧ್ಯಕ್ಷ ಎಸ್.ಎಂ. ಕೊಟಗಿ ಮಾತನಾಡಿ, ಉನ್ನತ ಶಿಕ್ಷಣ ಪಡೆದಿರುವ ವಸಂತ ಹೊರಟ್ಟಿ ಪದವೀಧರರ ಕ್ಷೇಮಕ್ಕಾಗಿ ಹಲವಾರು ಯೋಜನೆ, ಆಲೋಚನೆಗಳನ್ನು ಹೊಂದಿದ್ದಾರೆ. ಅವುಗಳನ್ನು ಕಾರ್ಯರೂಪಕ್ಕೆ ತರಲು ಈ ಚುನಾವಣೆಯಲ್ಲಿ ಅವರನ್ನು ಗೆಲ್ಲಿಸಲು ಪ್ರಾಮಾಣಿಕವಾಗಿ ಶ್ರಮಿಸೋಣ ಎಂದರು.
ನ್ಯಾಯವಾದಿ ಸಂಗಮೇಶ ಹಿರೇಮಠ ಸೇರಿದಂತೆ ಕಾಲೇಜಿನ ಎಲ್ಲ ಉಪನ್ಯಾಸಕರು ಮತ್ತು ಪದವೀಧರ ಮತದಾರರು ಉಪಸ್ಥಿತರಿದ್ದರು.