ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Rashmi Kasaragodu
Updated On : 22 Jun 2014, 12:44 pm

ಗದಗ: ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಆಯ್ಕೆ ಸಮಿತಿ ಸಭೆಯಲ್ಲಿ ಮುಂಡರಗಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಬೆಣ್ಣೆಹಳ್ಳಿ, ನಾರಾಯಣಪುರ, ಡಂಬಳ, ಕಲಕೇರಿ, ಕೊರ್ಲಹಳ್ಳಿ, ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಹಾಗೂ ಅಂಗನವಾಡಿ ಸಹಾಯಕಿ ಖಾಲಿ ಹುದ್ದೆಗೆ ಚುರ್ಚಿಹಾಳ, ಚಿಕ್ಕವಡ್ಡಟ್ಟಿ, ನಾಗರಹಳ್ಳಿ, ಹಳ್ಳಿಗುಡಿ, ಹಿರೇವಡ್ಡಟ್ಟಿ, ಕಲಕೇರಿ, ಪೇಠಾಲೂರು, ಶಿಂಗಟಾಲೂರ, ಡೋಣಿ, ಡಂಬಳ, ಹಮ್ಮಿಗಿ, ಕದಾಂಪುರ ಅಂಗನವಾಡಿ ಕೇಂದ್ರಗಳಿಗೆ ತಾತ್ಕಾಲಿಕ ಆಯ್ಕೆ ಮಾಡಲಾಗಿದೆ. ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು, ಸಾರ್ವಜನಿಕರ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮುಂಡರಗಿ ಇವರ ಕಾರ್ಯಾಲಯದ ಪ್ರಕಟಣಾ ಫಲಕದಲ್ಲಿ ಪ್ರಕಟಿಸಲಾಗಿದೆ. ತಾತ್ಕಾಲಿಕ ಆಯ್ಕೆ ಕುರಿತು ಆಕ್ಷೇಪಗಳಿದ್ದಲ್ಲಿ ಜೂ. 27ರ ಸಂಜೆ 5.30 ರೊಳಗಾಗಿ ಲಿಖಿತವಾಗಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಮುಂಡರಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹಿಂದುಳಿದ ವರ್ಗ ಸಭೆ ಇಂದು
ಗದಗ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಸಭೆ ಜೂ. 22ರ ಬೆಳಗ್ಗೆ 10.30ಕ್ಕೆ ಆಯೋಜಿಸಲಾಗಿದೆ. ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷ ಲಕ್ಷ್ಮಣ ಉಪ್ಪಾರ ಹಾಗೂ ಗದಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಳಕಪ್ಪ ಬಂಡಿ ಮುಂತಾದವರು ಭಾಗವಹಿಸುವಲಿದ್ದು, ಕಾರ್ಯಕಾರಿಣಿ ಸದಸ್ಯರು ಸಭೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಪ್ರದಾನ ಕಾರ್ಯದರ್ಶಿ ಅರುಣ ಅಣ್ಣಿಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಗದಗ ತಾಪಂ ಸಭೆ ನಾಳೆ
ಗದಗ: ಗದಗ ತಾಲೂಕು ಪಂಚಾಯಿತಿಯ ಸಾಮಾನ್ಯ ಸಭೆ ಜೂ. 23ರಂದು ಬೆಳಗ್ಗೆ 10.30ಕ್ಕೆ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ನಿಗದಿಪಡಿಸಲಾಗಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಶೇಖರಪ್ಪ ನಿಧನ
ನರೇಗಲ್ಲ: ಸ್ಥಳೀಯ ಅನ್ನದಾನೇಶ್ವರ ಮಹಾವಿದ್ಯಾಲಯದ ಭೌತಶಾಸ್ತ್ರ ಪ್ರಯೋಗಾಲಯದಲ್ಲಿ ಅಸಿಸ್ಟಂಟ್ ಆಗಿ ಸೇವೆ ಸಲ್ಲಿಸುತ್ತಿದ್ದ ಶೇಖರಪ್ಪ (ಚಂದ್ರು) ಮುಂದಿನಮನಿ ಶನಿವಾರ ಸಂಜೆ ನಿಧನರಾಗಿದ್ದಾರೆ. ಮೃತರು ಪತ್ನಿ, ಒಬ್ಬ ಪುತ್ರ ಹಾಗೂ ಓರ್ವ ಪುತ್ರಿ, ಅಪಾರ ಬಂಧು-ಬಳಗ ಇದ್ದಾರೆ. ಮೃತರ ಆತ್ಮಕ್ಕೆ ಚಿರಸಾಂತಿ ದೊರೆಯಲೆಂದು ಅನ್ನದಾನ ಸಮಿತಿಯ ಅದ್ಯಕ್ಷರು ಅಭಿನವ ಅನ್ನದಾನ ಶ್ರೀಗಳು ಸಂತಾಪ ಸೂಚಿಸಿದ್ದಾರೆ. ಆಡಳಿತಾಧಿಕಾರಿ ಎಸ್.ಜಿ. ಹಿರೇಮಠ, ಪದವಿ ಕಾಲೇಜು ಪ್ರಾಚಾರ್ಯ ಡಾ. ಅರವಿಂದ ಸಜ್ಜನ, ಪಪೂ ಕಾಲೇಜು ಪ್ರಾಚಾರ್ಯ ವೈ.ಸಿ. ಪಾಟೀಲ, ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement