ನೈರ್ಮಲ್ಯ ರಕ್ಷಣೆ ಎಲ್ಲರ ಜವಾಬ್ದಾರಿ: ಕಲಾಲ
ಗಜೇಂದ್ರಗಡ: ನಮ್ಮ ಸುತ್ತಲಿನ ಪರಿಸರ ಸ್ವಚ್ಛವಾಗಿಡುವುದರ ಜತೆ ನೈರ್ಮಲ್ಯ ರಕ್ಷಣೆಗೆ ಎಲ್ಲರೂ ಮುಂದಾಗಿ, ಮಲೇರಿಯಾ ನಿರ್ಮೂಲನೆ ಪ್ರತಿಯೊಬ್ಬರ ಜವಾಬ್ದಾರಿ ಎಂದು ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಎ.ಆರ್. ಕಲಾಲ ಹೇಳಿದರು. ಅವರು ಸಮೀಪದ ಲಕ್ಕಲಕಟ್ಟಿ ಗ್ರಾಮದ ಶಾಂತಗಿರಿ ಮಾರುತೇಶ್ವರ ಪ್ರೌಢಶಾಲೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಮಲೇರಿಯಾ ವಿರೋಧಿ ಮಾಸಾಚರಣೆ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಮಾತನಾಡಿದರು. ಸೊಳ್ಳೆಗಳಿಂದ ಹರಡಬಹುದಾದ ರೋಗಗಳನ್ನು ತಡೆಗಟ್ಟುವ ಮುಂಜಾಗ್ರತಾ ಕ್ರಮದಿಂದ ರೊಗಮುಕ್ತ ಸಮಾಜದ ನಿರ್ಮಾಣ ಸಾಧ್ಯ ಎಂದರು. ಆರ್.ಎಸ್. ಬಾಪೂರೆ ಮಾತನಾಡಿದರು. ಮುಖ್ಯೋಪಾಧ್ಯಾಯ ವಿ.ಎಚ್. ಹೆಗಡೆ, ಎಸ್.ಎನ್. ರಾಜಪುರೋಹಿತ, ಎಸ್.ಎಲ್. ಪವಾರ, ಆರೋಗ್ಯ ಸಹಾಯಕ ಸುನೀಲ ಹಬೀಬ್, ಎ.ಬಿ. ಮಾಲಿಪಾಟೀಲ ಉಪಸ್ಥಿತರಿದ್ದರು