ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ನವೋದಯ ಮಾದರಿ ವಸತಿ ಶಾಲೆಗೆ ಬದ್ಧ

Lingaraj Badiger
Updated On : 23 Jun 2014, 10:48 am

ಯಲಬುರ್ಗಾ: ಗ್ರಾಮೀಣ ಪ್ರದೇಶದ ಬಡ, ದೀನ ದಲಿತರ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ನವೋದಯ ವಿದ್ಯಾಲಯ ಮಾದರಿಯಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಶಾಲೆಗಳಂತೆ 100 ಹೊಸ ವಸತಿ ಶಾಲೆಗಳನ್ನು ತೆರೆಯಲು ಸರ್ಕಾರ ಬದ್ಧವಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಹೇಳಿದರು.
ಸರ್ಕಾರದಿಂದ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರಬಹುದು. ಆದರೆ ಅದಕ್ಕೆ ಬೇಕಾದ ಜಮೀನು ಕೊಡುವ ದಾನಿಗಳು ಸಿಗುತ್ತಿಲ್ಲ. ಆದರೂ ತಾಳಕೇರಿ ಗ್ರಾಮದಲ್ಲಿ ಹೊಸ ಬಸ್ ನಿಲ್ದಾಣಕ್ಕಾಗಿ 8 ದಲಿತ ಕುಟುಂಬಗಳು ಮನೆಗಳನ್ನು ತೆರವುಗೊಳಿಸಿ ಭೂಮಿ ನೀಡಲು ಮುಂದೆ ಬಂದಿರುವುದು ವಿಶೇಷ. ಅವರಿಗೆ ವಿಶೇಷ ಆರ್ಥಿಕ ನೆರವು ನೀಡಿ ಪ್ರೋತ್ಸಾಹಿಸಲಾಗುವುದು ಎಂದರು.
ರಾಜ್ಯದ ಬಡ ಹಾಗೂ ಮಧ್ಯಮ ವರ್ಗದ ಮಕ್ಕಳಿಗೆ ಕನಿಷ್ಠ ಪದವಿವರೆಗೂ ಶಿಕ್ಷಣ ನೀಡಬೇಕೆನ್ನುವ ಆಶಯ ಸರ್ಕಾರದ್ದು. ಈ ನಿಟ್ಟಿನಲ್ಲಿ ವಸತಿ ಶಾಲೆ ಹಾಗೂ ವಸತಿ ನಿಲಯಗಳ ಸ್ಥಾಪನೆಗೆ ಹೆಚ್ಚು ಆದ್ಯತೆ ನೀಡಲಾಗುವುದು. ಈ ಭಾಗದಲ್ಲಿ ಪದವಿವರೆಗೆ ಒಂದು ಮೊರಾರ್ಜಿ ವಸತಿ ಶಾಲೆ ನೀಡಬೇಕೆನ್ನುವ ಬೇಡಿಕೆಯನ್ನು ಶಾಸಕ ರಾಯರಡ್ಡಿ ಇಟ್ಟಿದ್ದಾರೆ. ಅದನ್ನು ಕೂಡ ಮಂಜೂರು ಮಾಡಿಕೊಡುತ್ತೇನೆ. ಆದರೆ ಪಾಲಕರು ನಿಮ್ಮ ಮಕ್ಕಳನ್ನು ತಪ್ಪದೇ ಶಾಲೆಗೆ ಕಳುಹಿಸಿ ಇದರ ಸದುಪಯೋಗ ಪಡೆಯಬೇಕು ಎಂದು ಕರೆ ನೀಡಿದರು. ಶಾಸಕ ಬಸವರಾಜ ರಾಯರಡ್ಡಿ ಪ್ರಾಸ್ತಾವಿಕ ಮಾತನಾಡಿ, ತಾಲೂಕಿನ ತಳಕಲ್‌ಗೆ ಎಂಜಿನಿಯರಿಂಗ್ ಕಾಲೇಜು ಹಾಗೂ ಗುನ್ನಾಳ ಗ್ರಾಮಕ್ಕೆ ಪಾಲಿಟೆಕ್ನಿಕ್ ಕಾಲೇಜಿಗಾಗಿ ಪ್ರಸ್ತಾವನೆ ಕಳುಹಿಸಲಾಗಿದೆ. ಅವುಗಳಿಗೆ ಸದ್ಯದಲ್ಲೇ ಮಂಜೂರಾತಿ ದೊರೆಯಲಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement