ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಬಾಡಿಗೆದಾರರನ್ನೇ ಫಲಾನುಭವಿ ಎಂದು ಘೋಷಿಸಿ

Lingaraj Badiger
Updated On : 25 Jun 2014, 11:06 am

ಗಜೇಂದ್ರಗಡ: ಸ್ಥಳೀಯ ಪುರಸಭೆ ವ್ಯಾಪ್ತಿಯಲ್ಲಿ ಕೊಳಚೆ ನಿರ್ಮೂಲನ ಮಂಡಳಿಯಿಂದ ನಿರ್ಮಾಣಗೊಂಡಿರುವ ಜಿ.ಎಸ್. ಪಾಟೀಲ ನಗರ ಮತ್ತು ವಾಜಪೇಯಿ ಬಡಾವಣೆಯ ಮನೆಗಳಲ್ಲಿ ಬಾಡಿಗೆದಾರರೇ ವಾಸವಾಗಿದ್ದಾರೆ. ಕೂಡಲೇ ಜಿಲ್ಲಾಡಳಿತ ಸೂಕ್ತ ತನಿಖೆ ನಡೆಸಿ ಬಾಡಿಗೆದಾರರನ್ನೇ ನೈಜ ಫಲಾನುಭವಿಗಳೆಂದು ಘೋಷಿಸಿ ಹಕ್ಕುಪತ್ರ ನೀಡಬೇಕೆಂದು ಸಿಪಿಐ (ಎಂ) ಮುಖಂಡ, ಪುರಸಭೆ ಸದಸ್ಯ ಎಂ.ಎಸ್. ಹಡಪದ ಒತ್ತಾಯಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಸರ್ಕಾರ ವಸತಿ ರಹಿತರ ಸಮಸ್ಯೆಗಳ ಪರಿಹಾರಕ್ಕಾಗಿ ವಿವಿಧ ನಿಗಮಗಳ ಮೂಲಕ ಉಚಿತ ನಿವೇಶನ, ಮನೆ ನಿರ್ಮಾಣಕ್ಕಾಗಿ ಸಹಾಯಧನ ಸಹಿತ ಅನೇಕ ವಿನೂತನ ಯೋಜನೆ ಜಾರಿಗೊಳಿಸಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಆ ಮೂಲಕ ಫಲಾನುಭವಿಗಳಿಗೆ ವಿತರಿಸಿ ಎಂದು ಸರ್ಕಾರ ಸ್ಥಳೀಯ ಆಡಳಿತಕ್ಕೆ ನಿರ್ದೇಶನ ನೀಡಿದೆ. ಆದರೆ ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ಸ್ಥಳೀಯ ಆಡಳಿತ ಸಂಪೂರ್ಣ ವಿಫಲವಾಗಿದೆ ಎನ್ನುವುದಕ್ಕೆ ಗಜೇಂದ್ರಗಡ ಪುರಸಭೆ ಆಡಳಿತವೇ ನಿದರ್ಶನ ಎಂದು ಆರೋಪಿಸಿದರು. ಕಾಂಗ್ರೆಸ್, ಬಿಜೆಪಿ ರಾಜಕೀಯ ಮೇಲಾಟಕ್ಕೆ ನಿವಾಸಿಗಳು ಬಲಿಪಶುಗಳಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement