ಬಿಜೆಪಿ ಎಸ್ಸಿ ಮೋರ್ಚಾ ಸಭೆ ಇಂದು
ಗದಗ: ಗದಗ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಸಭೆಯನ್ನು ಜೂ. 26ರಂದು ಬೆಳಗ್ಗೆ 10.30ಕ್ಕೆ ನಗರದ ಸ್ಟೇಷನ್ ರಸ್ತೆಯಲ್ಲಿರುವ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಕರೆಯಲಾಗಿದೆ. ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯದರ್ಶಿ ಯಲ್ಲಪ್ಪ ಬೆಂಡಿಗೇರಿ ಹಾಗೂ ಹಾವೇರಿ ತಾಲೂಕು ಬಿಜೆಪಿ ಅಧ್ಯಕ್ಷ ಡಾ. ಮಲ್ಲೇಶಪ್ಪ ಹರಿಜನ ಗದಗ ಜಿಲ್ಲೆಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ಸಂಘಟನೆ ಬಲಪಡಿಸುವ ಕುರಿತು ಚರ್ಚಿಸುವರು. ಸಂಸದ ಶಿವಕುಮಾರ ಉದಾಸಿ, ವಿಪ ಸದಸ್ಯ ಎಸ್.ವಿ. ಸಂಕನೂರ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕಳಕಪ್ಪ ಬಂಡಿ, ಸಿ.ಸಿ.ಪಾಟೀಲ, ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ, ರಾಮಣ್ಣ ಲಮಾಣಿ, ಎಂ.ಎಸ್. ಕರಿಗೌಡರ, ಇತರರು ಆಗಮಿಸುವರು. ಗದಗ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಜಾನೂ ಲಮಾಣಿ ಸಭೆ ಅಧ್ಯಕ್ಷತೆ ವಹಿಸುವರು.