ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಮಾದಕವಸ್ತು ವಿರೋಧಿ ದಿನ ಇಂದು

Lingaraj Badiger
Updated On : 26 Jun 2014, 10:58 am

ಗದಗ: ರಾಜ್ಯ ಮದ್ಯಪಾನ ಸಂಯಮ ಮಂಡಳಿ ವಾರ್ತಾ ಇಲಾಖೆಯ ಜಿಲ್ಲಾ ಕಚೇರಿಗಳ ಮೂಲಕ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜೂ. 26ರಂದು ಗದಗ ಜಿಲ್ಲಾಡಳಿತ, ಜಿಪಂ, ಆರೋಗ್ಯ ಮತ್ತು ಪಪೂ ಶಿಕ್ಷಣ ಇಲಾಖೆಗಳ ಸಹಕಾರದಲ್ಲಿ ಮಾದಕ ವಸ್ತು ವಿಶ್ವ ವಿರೋಧಿ ದಿನಾಚರಣೆ ಅಂಗವಾಗಿ ಜಾಥಾ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮಗಳನ್ನು ಏರ್ಪಡಿಸಿದೆ. ಜೂ. 26ರಂದು ಬೆಳಗ್ಗೆ 9 ಗಂಟೆಗೆ ಗದಗ ಮುನ್ಸಿಪಲ್ ಕಾಲೇಜ್ ಆವರಣದಿಂದ ಮಾದಕ ವಸ್ತು ವಿಶ್ವ ವಿರೋಧಿ ಜನಜಾಗೃತಿ ಜಾಥಾ ನಡೆಯಲಿದ್ದು, ಉದ್ಘಾಟನೆಯನ್ನು ಜಿಪಂ ಸಿಇಒ ವೀರಣ್ಣ ತುರಮರಿ ನೆರವೇರಿಸುವರು. ಜಾಗೃತಿ ಜಾಥಾದಲ್ಲಿ ಗದುಗಿನ ಸರ್ಕಾರಿ ಪಪೂ, ವಿಡಿಎಸ್ ಬಾಲಕ-ಬಾಲಕಿಯರ ಪಪೂ, ನಗರಸಭೆ ಪಪೂ ಮತ್ತು ಮಹೇಶ್ವರಿ ಮದರ ಥೆರೇಸಾ ಹಾಗೂ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಭಾಗವಹಿಸುವರು. ಜಾಗೃತಿ ಜಾಥಾ ನಗರದ ಮುನಸಿಪಲ್ ಕಾಲೇಜಿನ ಆವರಣದಿಂದ ಆರಂಭಗೊಂಡು ಗಾಂಧಿವೃತ್ತ, ಟಾಂಗಾ ಕೂಟ, ಬಸ್ ನಿಲ್ದಾಣ, ಭೂಮರೆಡ್ಡಿ ವೃತ್ತದ ಮೂಲಕ ಮರಳಿ ಮುನ್ಸಿಪಲ್ ಕಾಲೇಜು ಮೈದಾನಕ್ಕೆ ಬಂದು ಅಂತ್ಯಗೊಳ್ಳುವುದು. ಅನಂತರ 11 ಗಂಟೆಗೆ ಗದಗ ಜಿಲ್ಲಾಡಳಿತ ಭವನದಲ್ಲಿನ ಜಿಲ್ಲಾ ಆರೋಗ್ಯ ಇಲಾಖೆ ಸಭಾಂಗಣದಲ್ಲಿ ಜರುಗುವ ಡಿಸಿ ಎನ್.ಎಸ್. ಪ್ರಸನ್ನಕುಮಾರ ವಿಚಾರ ಸಂಕಿರಣ ಉದ್ಘಾಟಿಸುವರು. ಎಸ್ಪಿ ಕೆ.ಟಿ. ಬಾಲಕೃಷ್ಣ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಆರ್.ಎನ್. ಪಾಟೀಲ, ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಎಸ್. ಗೌಡರ ಆಗಮಿಸುವರು. ಪ್ರಾ. ಕೆ.ಎಚ್. ಬೇಲೂರ ವಿಶೇಷ ಉಪನ್ಯಾಸ ನೀಡುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಡಿ.ಬಿ. ಚೆನ್ನಶೆಟ್ಟಿ ಅಧ್ಯಕ್ಷತೆವಹಿಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement