ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಪ್ರವೇಶಪತ್ರ ಹಂಚಿಕೆ

Lingaraj Badiger
Updated On : 27 Jun 2014, 11:44 am

ಗದಗ: ಜುಲೈ-2014ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ ಹಾಜರಾಗುವ ಪುನರಾವರ್ತಿತ ಅಭ್ಯರ್ಥಿಗಳ ಪ್ರವೇಶಪತ್ರಗಳು ಬಂದಿವೆ. ಪ್ರಾಚಾರ್ಯರು ಪಪೂ ಶಿಕ್ಷಣ ಹಾಗೂ ವೃತ್ತಿ ಶಿಕ್ಷಣ ಕಚೇರಿಯಿಂದ ಪ್ರವೇಶಪತ್ರಗಳನ್ನು ಪಡೆದು ವಿದ್ಯಾರ್ಥಿಗಳಿಗೆ ವಿತರಿಸಲು ಗದಗ ಪಪೂ ಶಿಕ್ಷಣ ಹಾಗೂ ವೃತ್ತಿ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ವರ್ಗಾವಣೆ ಕೌನ್ಸೆಲಿಂಗ್
ಗದಗ: 2014ನೇ ಸಾಲಿಗಾಗಿ ಪ್ರಾಥಮಿಕ ಶಾಲಾ ಶಿಕ್ಷಕರ ಘಟಕದೊಳಗಿನ ಪರಸ್ಪರ ಹಾಗೂ ಕೋರಿಕೆ ವರ್ಗಾವಣೆ ಕೌನ್ಸೆಲಿಂಗ್ ಈ ಕೆಳಗಿನ ನಡೆಸಲಾಗುವುದು. ಕೌನ್ಸಲಿಂಗ್ ಜೂ. 28ರಂದು ಅಂತಿಮ ಆದ್ಯತಾ ಪಟ್ಟಿಯಂತೆ ಎಲ್ಲ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರು, ಎಲ್ಲ ಮಾದರಿ ಶಾಲೆಗಳ ಮುಖ್ಯ ಶಿಕ್ಷಕರು, ಎಲ್ಲ ದೈಹಿಕ ಶಿಕ್ಷಕರು, ಸಹ ಶಿಕ್ಷಕರ ವೃಂದ ಕ್ರಮ ಸಂಖ್ಯೆ 1ರಿಂದ 200ರ ವರೆಗೆ ಬೆಳಗ್ಗೆ 10 ಗಂಟೆಗೆ ಹಾಗೂ ಜೂ. 29ರಂದು ಪ್ರಾಥಮಿಕ ಶಾಲಾ ಸಹ ಶಿಕ್ಷಕರ ವೃಂದ ಕ್ರಮ ಸಂಖ್ಯೆ 201ರಿಂದ ಪಟ್ಟಿಯ ಮುಕ್ತಾಯದ ವರೆಗೆ ಬೆಳಗ್ಗೆ 10 ಗಂಟೆಗೆ ಗದಗ ಶಹರ ವಲಯದ ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿಯಲ್ಲಿ (ಜಿಲ್ಲಾ ನ್ಯಾಯಾಲಯದ ಹಿಂದುಗಡೆ) ನಡೆಸಲಾಗುವುದು. ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ದೃಢೀಕರಣ ಪಡೆದುಕೊಂಡ ಕೋರಿಕೆ ವರ್ಗಾವಣೆ ಬಯಸಿದ ಶಿಕ್ಷಕರು ತಪ್ಪದೇ ಬಿಇಒ ಕಾಫಿಯೊಂದಿಗೆ, ಆದ್ಯತೆ ಬಯಸಿದ ಬಗ್ಗೆ ದಾಖಲೆಗಳೊಂದಿಗೆ ನಿಗದಿತ ಸಮಯದಲ್ಲಿ ಕೌನ್ಸೆಲಿಂಗ್‌ಗೆ ಹಾಜರಿರಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ವಿ. ರಾಜೇಂದ್ರಪ್ರಸಾದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಗದಗ: ಜಿಲ್ಲಾ ವ್ಯಾಪ್ತಿಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿನ ಉತ್ತಮ ಸೇವೆ ಸಲ್ಲಿಸಿದ ಹಾಗೂ ಸೇವಾನಿರತ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ವ್ಯಾಪ್ತಿಯ ಅರ್ಹ ವಿಕಲಚೇತನರು ನಿಗದಿತ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಜು. 15ರೊಳಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿಗಳು, ಗದಗ ಜಿಲ್ಲಾ ಆಡಳಿತ ಭವನ, ಕೊಠಡಿ ಸಂಖ್ಯೆ 6 ಗದಗ ಅವರಿಗೆ ಸಲ್ಲಿಸಬೇಕು.
29ರಂದು ವಚನ ಸಾಹಿತ್ಯ ಪರಿಷತ್ ಉದ್ಘಾಟನೆ
ಗದಗ: ನಗರದ ಕೋರ್ಟ್ ರಸ್ತೆಯಲ್ಲಿರುವ ಲಯನ್ಸ್ ಕ್ಲಬ್ ಸಭಾಭವನದಲ್ಲಿ ಗದಗ ತಾಲೂಕು ವಚನ ಪರಿಷತ್ತಿನ ಉದ್ಘಾಟನಾ ಸಮಾರಂಭವನ್ನು ಜೂ. 29ರ ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಅಡ್ನೂರ ದಾಸೋಹ ಮಠದ ಪಂಚಾಕ್ಷರ ಶಿವಾಚಾರ್ಯ ಶ್ರೀಗಳು, ಹಿರೇಮಠ ಶ್ರೀಗಳವರು  ಆಗಮಿಸಲಿದ್ದಾರೆ. ಕರ್ನಾಟಕ ವಚನ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಗಣೇಶ ಸುಲ್ತಾನಪುರ ಅಧ್ಯಕ್ಷತೆ ವಹಿಸಲಿದ್ದಾರೆ. ನಗರದ ಖ್ಯಾತ ತೆರಿಗೆ ಸಲಹೆಗಾರ ಆನಂದ ಎಲ್. ಪೋತ್ನೀಸ್ ಲಯನ್ಸ್ ಕ್ಲಬ್ಬಿನ ಅಧ್ಯಕ್ಷ ಅರವಿಂದ ಪಟೇಲ, ಲಯನ್ಸ್  ಶಿಕ್ಷಣ ಸಂಸ್ಥೆ ಅಧ್ಯಕ್ಷ ಜೆ.ಡಿ. ಉತ್ತರಕರ, ಎಚ್.ಎಸ್. ದಳವಾಯಿ ಉಪಸ್ಥಿತರಿರುವರು ಎಂದು ತಿಳಿಸಿದೆ.
ಬೆಳೆವಿಮೆ ಯೋಜನೆಯಲ್ಲಿ ಭಾಗವಹಿಸಲು ಮನವಿ
ಮುಂಡರಗಿ: 2014-15ನೇ ಸಾಲಿನ ಮುಂಗಾರು ಹಂಗಾಮಿಗಾಗಿ ಪ್ರಾಯೋಗಿಕವಾಗಿ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಮುಂಡರಗಿ ತಾಲೂಕಿನಲ್ಲಿ ಅನುಷ್ಠಾನ ಗೊಳಿಸಲಾಗುತ್ತಿದೆ. ಅರ್ಹ ರೈತರು ಬೆಳೆವಿಮೆ ಯೋಜನೆಯಲ್ಲಿ ಭಾಗವಹಿಸಲು ಜೂ. 30 ಕೊನೆಯ ದಿನವಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸಹಾಯಕ ತೋಟಗಾರಿಕೆ ನಿರ್ದೇಶಕರ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement