ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಕಾರ್ಮಿಕರ ಕಲ್ಯಾಣ ಮಂಡಳಿ ಸೌಲಭ್ಯಕ್ಕೆ ಗುರುತಿನ ಚೀಟಿ ಅವಶ್ಯ: ಮುರಗೋಡ

Rashmi Kasaragodu
Updated On : 29 Jun 2014, 2:00 am

ಗದಗ: ಕಾರ್ಮಿಕರ ಕಲ್ಯಾಣ ಮಂಡಳಿ ಸೌಲಭ್ಯಕ್ಕೆ ಗುರುತಿನ ಚೀಟಿ ಅವಶ್ಯ ಎಂದು ಗದುಗಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಸ್.ಎಸ್. ಮುರಗೋಡ ಹೇಳಿದರು. ಅವರು ಗುರುವಾರ ಜಿಲ್ಲಾಡಳಿತದ ಸಭಾಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ವಕೀಲರ ಸಂಘ ಇವುಗಳ ಆಶ್ರಯದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗಾಗಿ ಏರ್ಪಡಿಸಿದ್ದ ವಿಶೇಷ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾರ್ಮಿಕರ ಮಕ್ಕಳಿಗೆ ಶೈಕ್ಷಣಕ ಸಾಲ, ಧನಸಹಾಯ ಹಾಗೂ ಮನೆ ಕಟ್ಟುವುದಕ್ಕೆ ರು. 2 ಲಕ್ಷ ವರೆಗೆ ಸಾಲ ನೀಡುತ್ತಿದ್ದು, ಅದರಲ್ಲಿ ರು. 50 ಸಾವಿರ ಸಬ್ಸಿಡಿ ಮಂಡಳಿಯಿಂದ ಬ್ಯಾಂಕಿಗೆ ಕಟ್ಟಲಾಗುತ್ತಿದೆ. ಇಂಥ ಸೌಲಭ್ಯ ಸದುಪಯೋಗಪಡಿಸಿಕೊಂಡು ನಿಮ್ಮದೇ ಆದ ಸ್ವಂತ ಸೂರು ಹೊಂದಿರಿ ಎಂದರು. ಅಧ್ಯಕ್ಷತೆ ವಹಿಸಿದ್ದ ಉಪವಿಭಾಗಾಧಿಕಾರಿ ಐ.ಜೆ. ಗದ್ಯಾಳ, ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರ ಎಸ್.ಜಿ. ಪಲ್ಲೇದ ಮಾತನಾಡಿದರು. ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕುಲಕರ್ಣಿ ಅಂಬಾದಾಸ ಜಿ., ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೊಸಮನಿ ಪುಂಡಲಿಕ, ಎಂ.ಎ. ಸಂಗನಾಳ, ಬಿ.ಎಚ್. ಮಾಡಲಗೇರಿ ಇದ್ದರು. ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ. ಬಾಲಕೃಷ್ಣ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಫಲಾನುಭವಿಗಳಿಗೆ ಗುರುತಿನ ಚೀಟಿ ವಿತರಣೆ ಹಾಗೂ ಸೌಲಭ್ಯಗಳ ಭಿತ್ತಿ ಪತ್ರ ವಿತರಿಸಲಾಯಿತು. ಸಾವಿತ್ರಿ ಕಬಾಡಿ ಸ್ವಾಗತಿಸಿ, ನಿರೂಪಿಸಿದರು.




Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement